
ಬೆಂಗಳೂರು/ ದಕ್ಷಿಣ ಕನ್ನಡ (ಆ.28): ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇಗುಲ ಹಾಗೂ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಇತ್ತೀಚೆಗೆ ಹರಡಿರುವ ಸುಳ್ಳು ಮತ್ತು ಅಪಪ್ರಚಾರದ ವರದಿಗಳನ್ನು ಹಾಗೂ ಯೂಟೂಬ್ ವಿಡಿಯೋಗಳನ್ನು ಕೂಡಲೇ ತೆಗೆದುಹಾಕುವಂತೆ (ಡಿಲೀಟ್) ಒತ್ತಾಯಿಸಿ ಕರ್ನಾಟಕ ಯುವ ಜನತಾ ದಳ (ಜೆಡಿಎಸ್) ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.
ಸುಳ್ಳು ಸುದ್ದಿ ಹರಡಿರುವ ಕುರಿತು ಪತ್ರದಲ್ಲಿ ಪ್ರಸ್ತಾಪ:
ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇಗುಲವು ರಾಜ್ಯದ ಮತ್ತು ದೇಶದಾದ್ಯಂತ ಭಕ್ತರ ಪಾಲಿಗೆ ಪೂಜನೀಯ ಸ್ಥಳವಾಗಿದೆ. ಇದು ಕೇವಲ ದೇವಾಲಯವಲ್ಲದೆ, ನಂಬಿಕೆ, ಸೇವೆ ಮತ್ತು ಸಾಮಾಜಿಕ ಸೌಹಾರ್ದದ ಪ್ರತೀಕವಾಗಿದೆ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರು ಹಲವಾರು ದಶಕಗಳಿಂದ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಇಂತಹ ಸಂಸ್ಥೆಯನ್ನು ಸುಳ್ಳು ಆರೋಪಗಳು ಮತ್ತು ಕಟ್ಟುಕಥೆಗಳ ಮೂಲಕ ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಮುಸ್ಲಿಂ ಹುಡುಗಿ ಸಂದರ್ಶನ: ವಿಡಿಯೋ ಡಿಲೀಟ್ಗೆ ಒತ್ತಡ- ಶಾಕಿಂಗ್ ವಿಷ್ಯ ಹೇಳಿದ ಯುಟ್ಯೂಬರ್!
ಸುಳ್ಳು ಪ್ರಚಾರಗಳ ಬಗ್ಗೆ ಪ್ರಮುಖ ಅಂಶಗಳು:
ಈ ಕುರಿತು, ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಲ್ಲಿ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ:
1. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪೋರ್ಟಲ್‌ಗಳು, ಸುದ್ದಿ ಸಂಸ್ಥೆಗಳು ಮತ್ತು ಆನ್‌ಲೈನ್ ವೇದಿಕೆಗಳಲ್ಲಿರುವ ಇಂತಹ ಸುಳ್ಳು ಮಾಹಿತಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು.
2. ಕೃತಕ ಬುದ್ಧಿಮತ್ತೆ (AI) ನಿರ್ಮಿತ ವೀಡಿಯೊಗಳು ಮತ್ತು ಕಟ್ಟುಕಥೆಗಳು ಹರಡುವುದನ್ನು ತಡೆಯಲು ನಿಯಂತ್ರಣ ವ್ಯವಸ್ಥೆಗಳನ್ನು ಬಲಪಡಿಸಬೇಕು. ವಿಶೇಷವಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ವಿರುದ್ಧದ ಸುಳ್ಳು ಸುದ್ದಿಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.
ಎಚ್‌ಡಿ ಕುಮಾರಸ್ವಾಮಿ ಮನೆಯಲ್ಲಿ ಗಣೇಶ ಹಬ್ಬದ ಖುಷಿ, ಮ್ಯಾಚಿಂಗ್ ಸೀರೆಯಲ್ಲಿ ಮಿಂಚಿದ ಅತ್ತೆ-ಸೊಸೆ!
ಧರ್ಮಸ್ಥಳದ ಘನತೆಯನ್ನು ರಕ್ಷಿಸುವುದು ಕೇವಲ ಒಂದು ದೇಗುಲವನ್ನು ರಕ್ಷಿಸುವುದಲ್ಲ, ಬದಲಾಗಿ ಕೋಟ್ಯಂತರ ಭಕ್ತರ ನಂಬಿಕೆಯನ್ನು ರಕ್ಷಿಸುವುದು ಮತ್ತು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವುದು ಎಂದು ನಿಖಿಲ್ ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವಿಷಯದಲ್ಲಿ ಸಚಿವಾಲಯವು ಶೀಘ್ರ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ