ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂಗೆ ಮತ್ತೊಂದು ಬಿಗ್ ಶಾಕ್

By Suvarna News  |  First Published Feb 17, 2021, 6:56 PM IST

ರಾಜ್ಯದಲ್ಲಿ ಪ್ರಮುಖ ಮೂರು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಇದರ ಮಧ್ಯೆ ಮತ್ತೊಂದು ಸಮುದಾಯ ಧ್ವನಿ ಎತ್ತಿದ್ದು, ಬಿಎಸ್‌ವೈಗೆ ಸಂಕಷ್ಟಕ್ಕೆ ಸಿಲುಕಿಸಿದೆ.


ಬೆಂಗಳೂರು, (ಫೆ.17): ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಸಮುದಾಯಗಳಿಂದ ಹೋರಾಟಗಳು ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

2A ನೀಡುವಂತೆ ಪಂಚಮಸಾಲಿ, ST ಮೀಸಲಾತಿಗಾಗಿ ಕುರುಬರು, ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ಬೇಡಿಕೆ ಇಟ್ಟಿವೆ. ಇದರಿಂದ ಏನು ಮಾಡಬೇಕೆನ್ನುವುದು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ತಲೆನೋವಾಗಿದೆ. ಇದರ ಮಧ್ಯೆ ಒಕ್ಕಲಿಗ ಸಮುದಾಯದಿಂದಲೂ ಮೀಸಲಾತಿಗೆ ಆಗ್ರಹ ಕೇಳಿಬಂದಿದೆ.

Tap to resize

Latest Videos

ಮೀಸಲಾತಿಗಾಗಿ ಹೋರಾಟ: ಸಮುದಾಯ, ಸ್ವಾಮೀಜಿಗಳಿಗೆ ಹೊಸ ಭರವಸೆ ಕೊಟ್ಟ ಸಿಎಂ

ಹೌದು...ಒಕ್ಕಲಿಗ ಸಮುದಾಯದ ಮೀಸಲಾತಿ ಪರವಾಗಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಧ್ವನಿ ಎತ್ತಿದ್ದು,  ಒಕ್ಕಲಿಗರ ಹಿತರಕ್ಷಣೆಗೆ ಮೀಸಲಾತಿ ಅನಿವಾರ್ಯವಾಗಿದೆ. ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ನಿರ್ಮಲಾನಂದ ಶ್ರೀಗಳು ಒತ್ತಾಯಿಸಿದ್ದಾರೆ.

115 ಉಪಜಾತಿಗಳನ್ನು ಓಬಿಸಿ ಪಟ್ಟಿಗೆ ಸೇರಿಸಬೇಕು. ಅನೇಕ ಉಪ ಜಾತಿಗೆ ಸರ್ಕಾರದ ಸೌಲಭ್ಯ ಸಿಕ್ಕಿಲ್ಲ ಎಂದು ಶೀಗಳು ಒಕ್ಕಲಿಗ ಸಮುದಾಯದ ಮೀಸಲಾತಿ ಪರವಾಗಿ ಧ್ವನಿ ಎತ್ತಿದ್ದಾರೆ. ಇದು ಬಿಎಸ್‌ವೈ ಸರ್ಕಾರಕ್ಕೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

click me!