ದಂತ ವೈದ್ಯಕೀಯ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನ, ವೈದ್ಯರೂ ಬದಲಾಗಬೇಕು: ಸಚಿವ ಡಾ.ಎಂ.ಸಿ.ಸುಧಾಕರ್

Published : Aug 24, 2025, 08:01 AM IST
Dr MC Sudhakar

ಸಾರಾಂಶ

ದಂತ ವೈದ್ಯಕೀಯ ಕ್ಲಿನಿಕ್‌ಗಳನ್ನು ದಂತ ವೈದ್ಯಕೀಯ ಆಸ್ಪತ್ರೆಗಳನ್ನಾಗಿ ಬದಲಾಯಿಸಲಾಗುತ್ತಿದ್ದು, ರೋಗಿಗಳನ್ನು ಆಕರ್ಷಿಸುವಲ್ಲಿ ತಂತ್ರಜ್ಞಾನದೊಂದಿಗೆ ಅನುಭವ, ಸಂಶೋಧನೆ,‌ಅಧ್ಯಯನದೊಂದಿಗೆ ವೈದ್ಯರೂ ಬದಲಾಗಬೇಕಿದೆ ಎಂದು ಸುಧಾಕರ್ ಅಭಿಪ್ರಾಯಪಟ್ಟರು.

ಉಳ್ಳಾಲ (ಆ.24): ದಂತ ವೈದ್ಯಕೀಯ ಕ್ಷೇತ್ರವು ಜಾಗತಿಕ ಮಟ್ಟದಲ್ಲಿ ಹೊಸ ಆವಿಷ್ಕಾರದೊಂದಿಗೆ ಬದಲಾವಣೆ ಕಾಣುತ್ತಿದ್ದು, ನೂತನ ತಂತ್ರಜ್ಞಾನವು ಲ್ಯಾಬೊರೇಟರಿ, ಆಸ್ಪತ್ರೆಗಳಲ್ಲೂ ಶೀಘ್ರವಾಗಿ ಪ್ರವೇಶಿಸಿದೆ. ದಂತ ವೈದ್ಯಕೀಯ ಕ್ಲಿನಿಕ್‌ಗಳನ್ನು ದಂತ ವೈದ್ಯಕೀಯ ಆಸ್ಪತ್ರೆಗಳನ್ನಾಗಿ ಬದಲಾಯಿಸಲಾಗುತ್ತಿದ್ದು, ರೋಗಿಗಳನ್ನು ಆಕರ್ಷಿಸುವಲ್ಲಿ ತಂತ್ರಜ್ಞಾನದೊಂದಿಗೆ ಅನುಭವ, ಸಂಶೋಧನೆ,‌ಅಧ್ಯಯನದೊಂದಿಗೆ ವೈದ್ಯರೂ ಬದಲಾಗಬೇಕಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಭಿಪ್ರಾಯಪಟ್ಟರು.

ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾಗಿರುವ ದೇರಳಕಟ್ಟೆಯ ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್ಸ್‌ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ನ 40 ವರ್ಷಗಳ ಶ್ರೇಷ್ಠತೆ ಸಂಭ್ರಮದ ಅಂಗವಾಗಿ ಅವಿಷ್ಕಾರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಹಳೆಯ ವಿದ್ಯಾರ್ಥಿಗಳ ಸಮಾವೇಶ ಮತ್ತು ಪ್ರೊ.ಡಾ.ಎನ್.ಶ್ರೀಧರ್ ಶೆಟ್ಟಿ ಹನ್ನೊಂದನೇ ವರ್ಷದ ದತ್ತಿ ಉಪನ್ಯಾಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿಟ್ಟೆ ಸಮೂಹ ಸಂಸ್ಥೆ ಗಳು ಕೆ. ಎಸ್ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಹಾಗೂ ಏ. ಬಿ ಶೆಟ್ಟಿ ದಂತವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳು ಅಪ್ರತಿಮ ಬೆಳವಣಿಗೆಗೆ ಸಾಕ್ಷಿಯಾಗಿದೆ. ಆರಂಭದಲ್ಲಿ ಸಣ್ಣ ಕಟ್ಟಡಗಳಿಂದ ಆರಂಭವಾದ ಈ ಮಹಾ ಸಂಸ್ಥೆ, ಇಂದು ಅನೇಕ‌ ಸಾಧನೆಗಳೊಂದಿಗೆ ಮುನ್ನಡೆಯುತ್ತಿದೆ. ಇಂದು ವಿನಯ ಹೆಗ್ಡೆಯವರ ನಾಯಕತ್ವದ ಹಾಗೂ ಮಾರ್ಗದರ್ಶನದಲ್ಲಿ ನಿಟ್ಟೆ ಅಸಾಮಾನ್ಯ ಬೆಳವಣಿಗೆಯನ್ನು ಕಂಡಿದೆ ಎಂದು ಸಂಸ್ಥೆಯ 40 ವರ್ಷದ ಪಯಣವನ್ನು ಸ್ಮರಿಸಿದರು.

ದಂತ ವೈದ್ಯಕೀಯ ಕಾಲೇಜಿನ ವಿಶ್ರಾಂತ ಡೀನ್ ಡಾ.ಎನ್‌. ಶ್ರೀಧರ್‌ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆ ಇಂದು ದೇಶದ ಅತ್ಯಂತ ಸ್ಮರಣೀಯ ಮತ್ತು ಪರಿಣಾಮಕಾರಿ ಸಂಸ್ಥೆಗಳಲ್ಲಿ ಒಂದಾಗಿ ಇದು ಗುರುತಿಸಿಕೊಂಡಿದೆ. ಈ ಸಂಸ್ಥೆಯಿಂದ ಅನೇಕ ವಿನಯಶೀಲ ಹಾಗೂ ಮಾನವೀಯ ವೃತ್ತಿಪರರು ವೈದ್ಯರು ರಾಷ್ಟ್ರ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ನಿಟ್ಟೆ ವಿವಿ ಸಹಕುಲಾಧಿಪತಿಗಳಾದ ಡಾ.ಎಂ.ಶಾಂತರಾಮ ಶೆಟ್ಟಿ, ನಿಟ್ಟೆ ವಿವಿ ಆಡಳಿತ ವಿಭಾಗದ ವಿಶಾಲ್‌ ಹೆಗ್ಡೆ, ಕುಲಪತಿ ಡಾ.ಎಂ.ಎಸ್‌. ಮೂಡಿತ್ತಾಯ, ಕುಲಸಚಿವ ಡಾ.ಹರ್ಷ ಹಾಲಹಳ್ಳಿ, ಉಪ ಪ್ರಾಂಶುಪಾಲ ಡಾ.ಎಂ.ಎಸ್. ರವಿ, ದತ್ತಿ ಉಪನ್ಯಾಸ ಸಂಯೋಜಕ ಡಾ.ರಾಹುಲ್ ಭಂಡಾರಿ, ಕಾರ್ಯಕ್ರಮ ಆಯೋಜನಾ ಕಾರ್ಯದರ್ಶಿ ಡಾ.ಶಿಶಿರ್ ಶೆಟ್ಟಿ ಉಪಸ್ಥಿತರಿದ್ದರು. ಸಮ್ಮೇಳನ ಆಯೋಜನಾ ಅಧ್ಯಕ್ಷೆ ಹಾಗೂ ಡೀನ್‌ ಪ್ರೊ.ಮಿತ್ರಾ ಎನ್. ಹೆಗ್ಡೆ ಸ್ವಾಗತಿಸಿದರು. ಡಾ. ಅಮರಶ್ರೀ ಶೆಟ್ಟಿ ಸ್ವಾಗತಿಸಿದರು. ಸಹ ಸಂಘಟನಾ ಕಾರ್ಯದರ್ಶಿ ಡಾ.ಪ್ರತೀಶ್ ಶೆಟ್ಟಿ ವಂದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!