ಕ್ಷಮೆ ಕೇಳಿದ ಗೂಗಲ್‌ ವಿರುದ್ಧ ಕ್ರಮ ಇಲ್ಲ: ಸಚಿವ ಲಿಂಬಾವಳಿ

Kannadaprabha News   | Asianet News
Published : Jun 05, 2021, 09:06 AM ISTUpdated : Jun 05, 2021, 09:18 AM IST
ಕ್ಷಮೆ ಕೇಳಿದ ಗೂಗಲ್‌ ವಿರುದ್ಧ ಕ್ರಮ ಇಲ್ಲ: ಸಚಿವ ಲಿಂಬಾವಳಿ

ಸಾರಾಂಶ

* ಗೂಗಲ್‌ ವಿರುದ್ಧ ರೊಚ್ಚಿಗೆದ್ದಿದ್ದ ಕನ್ನಡಿಗರು * ಕನ್ನಡದ ಕುರಿತು ಅವಹೇಳನ ಮಾಡಿದ ವೆಬ್‌ಸೈಟ್‌ ತೆಗೆದು ಹಾಕಿದ ಗೂಗಲ್‌  * ಇಂತಹ ಪ್ರಕರಣ ಮತ್ತೆ ಆಗಬಾರದೆಂದು ಎಚ್ಚರಿಕೆ ನೀಡಲಾಗಿದೆ: ಲಿಂಬಾವಾಳಿ  

ಬೆಂಗಳೂರು(ಜೂ.05): ಕನ್ನಡದ ಬಗ್ಗೆ ಕೆಟ್ಟ ಮಾಹಿತಿ ಬಿಂಬಿಸಿದ ಗೂಗಲ್‌ ಸಂಸ್ಥೆ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಸಂಸ್ಥೆ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೂಗಲ್‌ನಿಂದ ಕನ್ನಡಕ್ಕೆ ಅಪಮಾನವಾಗಿತ್ತು. ಆದ್ದರಿಂದ ಕಾನೂನು ಕ್ರಮಕ್ಕೆ ನಾವು ಮುಂದಾಗಿದ್ದೆವು. ಗುರುವಾರವೇ ಗೂಗಲ್‌ ಸಂಸ್ಥೆ ಎಚ್ಚೆತ್ತುಕೊಂಡು ಕ್ಷಮೆ ಕೇಳಿದೆ. ಅಲ್ಲದೇ ಕನ್ನಡದ ಕುರಿತು ಅವಹೇಳನ ಮಾಡಿದ ವೆಬ್‌ಸೈಟನ್ನು ಕೂಡಾ ತೆಗೆದು ಹಾಕಿದೆ. ಆದ್ದರಿಂದ ಸಂಸ್ಥೆ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ನಿರ್ಧಾರ ಕೈಬಿಟ್ಟಿದ್ದೇವೆ. ಇಂತಹ ಪ್ರಕರಣ ಮತ್ತೇ ಆಗಬಾರದೆಂದು ಎಚ್ಚರಿಕೆ ನೀಡಿರುವುದಾಗಿ ಹೇಳಿದರು.

ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್, ಇನ್ನುಮುಂದೆ ಹೀಗಾಗಲ್ಲ

ಭಾರತದ ಕೊಳಕು ಭಾಷೆ ಯಾವುದು ಎಂದು ಗೂಗಲ್‌ ಮಾಡಿದಾಗ ಕನ್ನಡ ಎಂಬ ಮಾಹಿತಿ ನೀಡುವ ವೆಬ್‌ಪುಟ ತೆರೆದುಕೊಳ್ಳುತ್ತಿದ್ದದ್ದು ಕನ್ನಡಿಗರನ್ನು ರೊಚ್ಚಿಗೆಬ್ಬಿಸಿದ್ದು, ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ವಿಪರೀತ ಟ್ರೋಲ್‌ ಆಗಿತ್ತು. ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಕನ್ನಡದ ಬಗ್ಗೆ ಕೆಟ್ಟಮಾಹಿತಿ ಬಿಂಬಿಸುತ್ತಿರುವ ಗೂಗಲ್‌ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿತು. ಇದರ ಬೆನ್ನಲ್ಲೇ ಗೂಗಲ್‌ ಸಂಸ್ಥೆಯು ಕನ್ನಡ ಕೊಳಕು ಭಾಷೆ ಎಂದು ಬಿಂಬಿಸಿದ್ದ ವೆಬ್‌ಪೇಜ್‌ ತೆಗೆದುಹಾಕಿ ಕ್ಷಮೆ ಕೋರಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ