ಸ್ಥಳೀಯ ಚುನಾವಣೆಗೆ ದಳ ಏಕಾಂಗಿ ಸ್ಪರ್ಧೆ

By Kannadaprabha NewsFirst Published Oct 23, 2019, 10:25 AM IST
Highlights

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾರೊಂದಿಗೂ ಕೂಡ ಮೈತ್ರಿ ಇಲ್ಲ ಎಂದು ಜೆಡಿಎಸ್ ಮುಖಂಡ ಎಚ್ ಡಿ ದೇವೇಗೌಡ ಹೇಳಿದ್ದಾರೆ. 

ಬೆಂಗಳೂರು [ಅ.23]:  ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಬಿಜೆಪಿ ಮಣಿಸಲು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೆವು. ಆದರೆ ಈ ಬಾರಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅಗತ್ಯ ಇರುವ ಕಡೆ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಗಳೂರಿನಲ್ಲಿ ಒಬ್ಬ ಜೆಡಿಎಸ್‌ ಪಾಲಿಕೆ ಸದಸ್ಯರಿದ್ದು, ಎಲ್ಲ ವಾರ್ಡ್‌ನಲ್ಲಿ ಸ್ಪರ್ಧಿಸಲಾಗುವುದು. ಮಂಗಳೂರಿನಲ್ಲಿ ನಾಲ್ಕೈದು ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಪ್ರವಾಸ ಕೈಗೊಂಡು ಸ್ಥಳೀಯರ ಮುಖಂಡರ ಜತೆ ಚರ್ಚಿಸಿ ಟಿಕೆಟ್‌ ಅಂತಿಮಗೊಳಿಸಲಾಗುವುದು. ಮಂಗಳೂರಿಗೆ ಹೆಚ್ಚು ಭೇಟಿ ನೀಡದ ಕಾರಣ ಜೆಡಿಎಸ್‌ ಮಂಗಳೂರಿನಲ್ಲಿ ಹಿಂದೆ ಬಿದ್ದಿದೆ ಎಂದರು.

click me!