ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಇಲ್ಲ ; ಮುಂದಿನ ತಿಂಗಳೂ ಉಚಿತ 5 ಕೇಜಿ ಅಕ್ಕಿ ಬದಲು ಹಣ : ಮುನಿಯಪ್ಪ

Published : Aug 19, 2023, 04:57 AM IST
ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಇಲ್ಲ ; ಮುಂದಿನ ತಿಂಗಳೂ ಉಚಿತ 5 ಕೇಜಿ ಅಕ್ಕಿ ಬದಲು ಹಣ : ಮುನಿಯಪ್ಪ

ಸಾರಾಂಶ

ಸದಾಗಿ ಎ ಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್‌ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ನೀಡಿಲ್ಲ. ಮುಂದಿನ ದಿನದಲ್ಲಿ ಯಾವ ಕಾರಣಕ್ಕಾಗಿ ಹೊಸದಾಗಿ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ಎಂಬುದನ್ನು ತಿಳಿಸಲಾಗುವುದು. ಸದ್ಯಕ್ಕಂತೂ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಆ.19 :  ಹೊಸದಾಗಿ ಎ ಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್‌ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ನೀಡಿಲ್ಲ. ಮುಂದಿನ ದಿನದಲ್ಲಿ ಯಾವ ಕಾರಣಕ್ಕಾಗಿ ಹೊಸದಾಗಿ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ ಎಂಬುದನ್ನು ತಿಳಿಸಲಾಗುವುದು. ಸದ್ಯಕ್ಕಂತೂ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಮುಂದಿನ ತಿಂಗಳು ಕೂಡ ಅಕ್ಕಿ ಲಭ್ಯವಾಗದ ಹಿನ್ನೆಲೆಯಲ್ಲಿ ನಗದು ಹಣ ನೀಡುವುದನ್ನೇ ಮುಂದುವರೆಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಇಲಾಖಾ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಕಾರ್ಡ್‌ ನೀಡಲು ಸೂಚನೆ ನೀಡಲಾಗಿದೆ. ಅಲ್ಲದೇ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದರು.

ಅನ್ನಭಾಗ್ಯ ಸಿದ್ದರಾಮಯ್ಯರ ಅಚ್ಚುಮೆಚ್ಚಿನ ಕಾರ್ಯಕ್ರಮ: ಶಾಸಕ ಬಸವರಾಜ ರಾಯರಡ್ಡಿ

ಸೆಪ್ಟೆಂಬರ್‌ ತಿಂಗಳಿಂದ ಪಡಿತರದಲ್ಲಿ ಐದು ಕೆಜಿ ಅಕ್ಕಿ ನೀಡಲು ನಿರ್ಣಯಿಸಲಾಗಿತ್ತು. ಆದರೆ, ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿಯ ಬದಲಿಗೆ ನಗದು ಹಣವನ್ನೇ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯನ್ನು ನೀಡಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಅಕ್ಕಿ ನೀಡಲು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮುಂದೆ ಬಂದಿವೆ. ದರದ ಬಗ್ಗೆ ಎರಡು ರಾಜ್ಯಗಳ ಅಧಿಕಾರಿಗಳ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ 10 ದಿನದಲ್ಲಿ ಎಲ್ಲವೂ ಅಂತಿಮವಾಗಲಿದೆ. ಆದರೂ ಅಕ್ಕಿ ವಿತರಣೆ ಕುರಿತು ಈಗಲೇ ಸ್ಪಷ್ಟವಾಗಿ ತಿಳಿಸಲಾಗುವುದಿಲ್ಲ ಎಂದು ಹೇಳಿದರು.

ಕಳೆದ ತಿಂಗಳು ಖಾತೆಗಳ ಮಾಹಿತಿ ಇಲ್ಲದೆ ಅವಕಾಶ ವಂಚಿತ 25 ಲಕ್ಷಕ್ಕೂ ಹೆಚ್ಚು ಮಂದಿಗೆ ಈ ಬಾರಿ ಅನ್ನಭಾಗ್ಯ ಯೋಜನೆಯಡಿ ಹಣ ಸಂದಾಯ ಮಾಡಲಾಗುವುದು. ಈ ತಿಂಗಳ 26ರೊಳಗೆ ಫಲಾನುಭವಿಗಳ ಖಾತೆಗಳಿಗೆ ಹಣ ಸಂದಾಯ ಮಾಡಲಾಗುತ್ತದೆ. ರಾಜ್ಯದಲ್ಲಿ 1.28 ಕೋಟಿ ಕಾರ್ಡ್‌ಗಳ ಪೈಕಿ 1 ಕೋಟಿ ಕಾರ್ಡ್‌ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ಉಳಿದ ಸುಮಾರು 21 ಲಕ್ಷ ಫಲಾನುಭವಿಗಳ ಬ್ಯಾಂಕ್‌ ಖಾತೆ ಹೊಂದಾಣಿಕೆಯಾಗುತ್ತಿಲ್ಲ. ಈ ಪೈಕಿ ಏಳು ಲಕ್ಷ ಕಾರ್ಡ್‌ಗಳ ಸಮಸ್ಯೆ ಸರಿಪಡಿಸಲಾಗಿದೆ. ಉಳಿದ 14 ಲಕ್ಷ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಿ ಸರಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಖಾಲಿ ಹುದ್ದೆ ಭರ್ತಿ:

ಆಹಾರ ಇಲಾಖೆಯಲ್ಲಿ ಖಾಲಿ ಇರುವ 2,181 ಹುದ್ದೆಗಳ ಭರ್ತಿ ಮಾಡಿಕೊಳ್ಳುವಂತೆ ಇಲಾಖೆ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಪ್ರಸ್ತುತ 3500 ಹುದ್ದೆಗಳ ಅವಶ್ಯಕತೆ ಇದೆ. ಇದರಲ್ಲಿ ಕೇವಲ 1300 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದ ಹುದ್ದೆಗಳು ಖಾಲಿ ಇದ್ದು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಮಟ್ಟದಲ್ಲಿ ಇಲಾಖೆಯ ಹೊಣೆಯನ್ನು ತಹಸೀಲ್ದಾರ್‌ ನೋಡಿಕೊಳ್ಳುತ್ತಿದ್ದಾರೆ. ಇದರ ಬದಲಿಗೆ ಪ್ರತ್ಯೇಕ ಇಲಾಖೆ ಕಚೇರಿಯನ್ನು ಸ್ಥಾಪಿಸಲು ನಿರ್ಣಯಿಸಲಾಗಿದೆ. ಸಹಾಯಕ ನಿರ್ದೇಶಕರ ಹುದ್ದೆಯನ್ನು ಸೃಷ್ಟಿಸಿ ಇಲಾಖೆಯ ಸಿಬ್ಬಂದಿಯನ್ನೇ ನೇಮಿಸಲಾಗುವುದು ಎಂದರು.

ಅಕ್ಕಿ ಪಡೆಯದ ಬಿಪಿಎಲ್‌ ಕಾರ್ಡುದಾರರಿಗೆ ಕುತ್ತು: ಸಚಿವ ಮುನಿಯಪ್ಪ ಹೇಳಿದ್ದೇನು?

ಜೋಳ, ರಾಗಿ ಹೆಚ್ಚಿಸುವ ಕುರಿತು ಚಿಂತನೆ

ಪಡಿತರದಲ್ಲಿ ಅಕ್ಕಿಯ ಜತೆಗೆ ನೀಡುತ್ತಿರುವ ಜೋಳ ಮತ್ತು ರಾಗಿಯ ಪ್ರಮಾಣವನ್ನು ಹೆಚ್ಚಿಸಬೇಕೇ ಎಂಬುದರ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಜೋಳ ಮತ್ತು ದಕ್ಷಿಣ ಕರ್ನಾಟಕದಲ್ಲಿ ರಾಗಿಯನ್ನು ನೀಡಲಾಗುತ್ತಿದೆ. ಪ್ರಸ್ತುತ ಪಡಿತರದಲ್ಲಿ ನಾಲ್ಕು ಟನ್‌ ರಾಗಿ ಮತ್ತು ಒಂದು ಟನ್‌ ಜೋಳ ನೀಡಲಾಗುತ್ತಿದೆ. ಕೆಲವು ಜಿಲ್ಲೆಗಳಿಗೆ ಇದಕ್ಕೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಿ ಅಕ್ಕಿ ಬಳಕೆ ಮಾಡುವುದಿಲ್ಲವೋ ಅಲ್ಲಿ ರಾಗಿ ಅಥವಾ ಜೋಳ ಪೂರೈಕೆ ಮಾಡಲು ಚರ್ಚೆ ನಡೆದಿದೆ. ಅಧಿಕಾರಿಗಳು ವರದಿ ನೀಡಿದರೆ ಅದಕ್ಕನುಗುಣವಾಗಿ ಅಕ್ಕಿ ಬದಲಿಗೆ ರಾಗಿ, ಜೋಳ ಪೂರೈಕೆ ಮಾಡಲು ಸಹಕಾರಿಯಾಗಲಿದೆ. ಬೆಂಬಲ ಬೆಲೆಯಲ್ಲಿ ಎಂಟು ಲಕ್ಷ ಮೆಟ್ರಿಕ್‌ ಟನ್‌ ರಾಗಿ, ಮೂರು ಲಕ್ಷ ಮೆಟ್ರಿಕ್‌ ಟನ್‌ ಜೋಳ ಖರೀದಿಗೆ ಅವಕಾಶ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ