ಟ್ಯಾಕ್ಸಿ - ಕ್ಯಾಬ್ ಗಳಲ್ಲಿ ಇನ್ನುಮುಂದೆ ಇರಲ್ಲ ಈ ವ್ಯವಸ್ಥೆ

By Web DeskFirst Published Jan 24, 2019, 7:27 AM IST
Highlights

ಇನ್ನುಮುಂದೆ ಟ್ಯಾಕ್ಸಿ ಹಾಗೂ ಕ್ಯಾಬ್ ಗಳಲ್ಲಿ ಈ ವ್ಯವಸ್ಥೆ ಇರೋದಿಲ್ಲ. ಸರ್ಕಾರವು ಟ್ಯಾಕ್ಸಿ ಹಾಗೂ ಕ್ಯಾಬ್ ಗಳಲ್ಲಿ ಶೀಘ್ರವೇ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರೀಯಗೊಳಿಸಲು ನಿರ್ಧರಿಸಿದೆ. 

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿನ ಎಲ್ಲ ಟ್ಯಾಕ್ಸಿ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯ ಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಭರವಸೆ ನೀಡಿದೆ. 

ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿ ಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀ ರೋಗ ಸೊಸೈಟಿ (ಬಿಎಸ್‌ಒಜಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. 

ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಹಾಜರಾಗಿ, ಟ್ಯಾಕ್ಸಿ ಹಾಗೂ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸಲು ರಾಜ್ಯ ಸರ್ಕಾರ ತಿದ್ದುಪಡಿಸಿ ನಿಯಮ ರೂಪಿಸಿ ಅಧಿಸೂಚನೆ ಹೊರಡಿಸಿದೆ. 

42  ಸಾವಿರ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಉಳಿದ ಎಲ್ಲ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

click me!