ಗ್ರಾಪಂ ಪ್ರತಿನಿಧಿಗಳ ಅಧಿಕಾರ ಮೊಟಕಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

By Kannadaprabha News  |  First Published Oct 12, 2022, 10:30 AM IST

ಪಂಚಾಯತ್‌ ಸದಸ್ಯರು ಆತಂಕಪಡುವ ಅಗತ್ಯವಿಲ್ಲವೆಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದ ಅರಗ ಜ್ಞಾನೇಂದ್ರ


ಬೆಂಗಳೂರು(ಅ.12):  ಸರ್ಕಾರದ ಮುಂದೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರುಗಳ ಅಧಿಕಾರ ಮೊಟಕುಗೊಳಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಳಗ್ಗೆ ಭೇಟಿಯಾಗಿ ಮಾತುಕತೆ ನಡೆಸಿದೆ. ಆ ವೇಳೆ ಅಂಥ ಯಾವುದೇ ಪ್ರಸ್ತಾವನೆ ಇಲ್ಲ. ಪಂಚಾಯತ್‌ ಸದಸ್ಯರು ಆತಂಕಪಡುವ ಅಗತ್ಯವಿಲ್ಲವೆಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ಅಧಿನಿಯಮಗಳಿಗೆ ತಿದ್ದುಪಡಿಗೆ ಯಾವುದೇ ತರುವ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದರು.

Tap to resize

Latest Videos

ಕರ್ನಾಟಕಕ್ಕೆ ಎಫ್‌ಎಸ್‌ಎಲ್‌ ವಿವಿ ಮಂಜೂರು: ಗೃಹ ಸಚಿವ ಆರಗ ಜ್ಞಾನೇಂದ್ರ

ಗ್ರಾಪಂ ಸಂಸ್ಥೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿದೆ. ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣಗೊಳಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಬದ್ಧವಾಗಿದೆ. ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಲಾಗುತ್ತಿದೆ ಎಂಬ ವರದಿಗಳಾಗಿದ್ದವು. ಅಂತಿಮವಾಗಿ ಮುಖ್ಯಮಂತ್ರಿಗಳ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ ಎಂದರು.
 

click me!