ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಎಲ್ಲೂ ಸ್ಥಗಿತವಾಗಿಲ್ಲ. ನಮ್ಮ ರಾಜ್ಯಕ್ಕೆ ಕಲ್ಲಿದ್ದಲು ಸರಬರಾಜು ನಿರ್ವಹಣೆ ಚೆನ್ನಾಗಿ ನಡೆಯುತ್ತಿದೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆಯಾಗದಂತೆ ನಿರ್ವಹಣೆ ಮಾಡುತ್ತೇವೆ ಎಂದು ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಉಡುಪಿ (ಮೇ.2): ರಾಜ್ಯಾದ್ಯಂತ ಹತ್ತು ದಿನಗಳ ಕಾಲ ಎಲ್ಲಾ ಟ್ರಾನ್ಸ್ಫಾರ್ಮರ್ ಗಳ ನಿರ್ವಹಣೆಗೆ ಸೂಚನೆ ನೀಡಲಾಗಿದ್ದು ನಿರ್ವಹಣಾ ಅಭಿಯಾನ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಇಂಧನ ಇಲಾಖೆಯಿಂದ ಹೊಸ ಅಭಿಯಾನವನ್ನು ಆರಂಭ ಮಾಡುತ್ತಿದ್ದೇವೆ, ಮೇ 5ರಿಂದ ಮೇ 15ರ ತನಕ ಈ ಅಭಿಯಾನ ರಾಜ್ಯಾದ್ಯಂತ ನಡೆಯುತ್ತದೆ. ಲೈನ್ ಮ್ಯಾನ್ ನಿಂದ ಹಿರಿಯ ಅಧಿಕಾರಿ ತನಕ ಎಲ್ಲರೂ ಟ್ರಾನ್ಸ್ಫಾರ್ಮರ್ ನಿರ್ವಹಣೆ ಕಡೆ ಗಮನ ಕೊಡುತ್ತಾರೆ ಎಂದರು.
ಟ್ರಾನ್ಸ್ಫಾರ್ಮರ್ ಗಳ ನಿರ್ವಹಣೆ ಸಮಸ್ಯೆಯಾಗಿದೆ, ಕೆಲಕಡೆ ಟಿಸಿ ಬ್ಲಾಸ್ಟ್ ಆಗಿ ಪ್ರಾಣಹಾನಿಯಾಗಿದೆ. ಈ ಬಗ್ಗೆ ಎಲ್ಲಾ ರೀತಿಯ ಪೂರ್ವಭಾವಿ ಸಭೆ ಗಳನ್ನು ನಾವು ನಡೆಸಿದ್ದೇವೆ. ಹೆಚ್ಚುವರಿ ಲೋಡು, ಅರ್ಥಿಂಗ್ ಆಯಿಲ್ ಕೊರತೆ ಮುಂತಾದ ಎಲ್ಲಾ ತಪಾಸಣೆಗಳನ್ನು ಈ ವೇಳೆ ನಡೆಸಲಾಗುವುದು. ಅಪಾಯದ ಸ್ಥಿತಿಯಲ್ಲಿರುವ ಟಿಸಿ ಗಳನ್ನು ತಕ್ಷಣ ಬದಲಾಯಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
Chikkamagaluru ಆಂಜನೇಯ ನಿಂತಿರೋದು ಐದು ಲಕ್ಷ ಪುಸ್ತಕಗಳ ಮೇಲೆ!
ರಾಜ್ಯಾದ್ಯಂತ 1000 ವಿದ್ಯುತ್ ಚಾರ್ಜಿಂಗ್ ಸೆಂಟರ್: ದ್ವಿಚಕ್ರ ಮತ್ತು ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳು ಸಾಕಷ್ಟು ಬರುತ್ತಿದೆ. ರಾಜ್ಯಾದ್ಯಂತ ಚಾರ್ಜಿಂಗ್ ಸೆಂಟರನ್ನು ಸ್ಥಾಪನೆ ಮಾಡುತ್ತಿದ್ದೇನೆ. ರಾಜ್ಯಾದ್ಯಂತ 1000 ವಿದ್ಯುತ್ ಚಾರ್ಜಿಂಗ್ ಸೆಂಟರ್ ಆರಂಭವಾಗಲಿದೆ.ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಚಾರ್ಜಿಂಗ್ ಸೆಂಟರ್ಗಳನ್ನು ಮೊದಲು ಶುರು ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಎಲ್ಲೂ ಸ್ಥಗಿತವಾಗಿಲ್ಲ. ನಮ್ಮ ರಾಜ್ಯಕ್ಕೆ ಕಲ್ಲಿದ್ದಲು ಸರಬರಾಜು ನಿರ್ವಹಣೆ ಚೆನ್ನಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ಜೊತೆ ಮಾತುಕತೆ- ಸಮನ್ವಯ ಸಾಧಿಸಿ ಕಲ್ಲಿದ್ದಲು ಪೂರೈಕೆ ಮಾಡಿಕೊಳ್ಳುತ್ತಿದ್ದೇವೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದಲ್ಲಿ ಮಳೆಯಾಗಿರುವುದರಿಂದ ವಿದ್ಯುತ್ ಉತ್ಪಾದನೆ ಮೇಲೆ ಒತ್ತಡ ಕಡಿಮೆಯಾಗಿದೆ. ರಾಜ್ಯಕ್ಕೆ 13 ರಿಂದ 15 ರೇಖ್ ಕಲ್ಲಿದ್ದಲು ಪೂರೈಕೆ ಆಗುತ್ತಿದೆ.
ಮೇ 30 ಬೇಸಿಗೆ ಕಾಲ ಮುಗಿಯುವ ತನಕ ಬರಬಹುದಾದ ಸವಾಲುಗಳನ್ನು ನಿರ್ವಹಣೆ ಮಾಡುತ್ತೇವೆ. ಪ್ರತಿ ಎರಡು ದಿನಕ್ಕೊಂದು ಬಾರಿ ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಚರ್ಚೆಗಳನ್ನು ಮಾಡುತ್ತಿದ್ದೇವೆ. ಕಲ್ಲಿದ್ದಲಿನ ಬಳಕೆ ಮತ್ತು ಪೂರೈಕೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆಯಾಗದಂತೆ ನಿರ್ವಹಣೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
PSI Recruitment Scam: ಹಗರಣದಲ್ಲಿ ಪ್ರಭಾವಿ ಮಂತ್ರಿಗಳೇ ಭಾಗಿ, ಕಾಂಗ್ರೆಸ್ ಆರೋಪ!
ವಿದ್ಯುತ್ ಸಮಸ್ಯೆ ಮತ್ತಷ್ಟು ತೀವ್ರ!: ಬೇಸಿಗೆಯ ದಿನ, ಉಷ್ಣ ಮಾರುತದ ಪರಿಣಾಮ ದೇಶಾದ್ಯಂತ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ಗರಿಷ್ಠ ತಲುಪಿದ್ದು, ಇದೇ ವೇಳೆ ಕಲ್ಲಿದ್ದಲು ಕೊರತೆ ಕಾರಣ ವಿದ್ಯುತ್ ಉತ್ಪಾದನೆ ಕುಸಿತ ಕಂಡಿದ್ದು, ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸ ಸಾರ್ವಕಾಲಿಕ ಗರಿಷ್ಠ ಪ್ರಮಾಣ ತಲುಪಿದೆ.
ಕಳೆದ ಭಾನುವಾರ ದೇಶದಲ್ಲಿ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸ 2.64 ಗಿಗಾವ್ಯಾಟ್ ಇದ್ದರೆ, ಸೋಮವಾರ ಅದು 5.24 ಗಿಗಾವ್ಯಾಟ್‌ಗೆ, ಮಂಗಳವಾರ 10.29 ಗಿಗಾವ್ಯಾಟ್, ಗುರುವಾರ 10.77 ಗಿಗಾವ್ಯಾಟ್‌ಗೆ ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಪ್ರಮಾಣ ತಲುಪಿದೆ. ಆದರೆ ಶುಕ್ರವಾರದಂದು ಉತ್ಪಾದನಾ ಘಟಕಗಳು ಸಾರ್ವಕಾಲಿಕ ಗರಿಷ್ಠ 207.11 ಗಿಗಾ ವ್ಯಾಟ್ ವಿದ್ಯುತ್ ಪೂರೈಕೆ ಮಾಡಿದ್ದರಿಂದ ವಿದ್ಯುತ್ ಕೊರತೆ ಶುಕ್ರವಾರ 8.12 ಗಿಗಾ ವ್ಯಾಟ್‌ಗೆ ಇಳಿಕೆ ಕಂಡಿದೆ.
ಕಾರಣ ಏನು?: ದೇಶದೆಲ್ಲೆಡೆ ಭಾರೀ ಉಷ್ಣಾಂಶವಿರುವ ಕಾರಣ ಜನರ ವಿದ್ಯುತ್ ಬಳಕೆ ಹೆಚ್ಚಾಗಿದೆ. ಆದರೆ ಉತ್ಪಾದನೆ ಕಡಿತ, ಜಾಗತಿಕ ಮಟ್ಟದಲ್ಲಿ ದರ ಏರಿಕೆ ಕಾರಣ ಕಲ್ಲಿದ್ದಲು ಪೂರೈಕೆ ಕಡಿಮೆಯಾಗಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಗರಿಷ್ಠ ಪ್ರಮಾಣದ ಉತ್ಪಾದನೆ ಸಾಧ್ಯವಾಗದೇ ಕೊರತೆ ಎದುರಾಗಿದೆ.
ಕಲ್ಲಿದ್ದಲು ಕೊರತೆಯಿಲ್ಲ, 10 ದಿನಕ್ಕಾಗುವಷ್ಟುಇದೆ: ದೇಶದಲ್ಲಿ ಕಲ್ಲಿದ್ದಲು ಸಮಸ್ಯೆಯಾಗಲ್ಲ. 10 ದಿನಗಳಿಗಾಗುವಷ್ಟುಕಲ್ಲಿದ್ದಲು ದಾಸ್ತಾನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ದೇಶದ ಥರ್ಮಲ್ ಪವರ್ ಪ್ಲಾಂಟ್‌ಗಳಲ್ಲಿ 21.55 ಮಿಲಿಯನ್ ಟನ್ ಕಲ್ಲಿದ್ದಲು ದಾಸ್ತಾನಿದೆ. ಕೋಲ್ ಕಂಪನಿಗಳಲ್ಲಿ 72.05 ಮಿಲಿಯನ್ ಟನ್ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದರು.
ಈ ತಿಂಗಳು ಅನಿರೀಕ್ಷಿತವಾಗಿ ಬಿಸಿಲು ಹೆಚ್ಚಿದ್ದು, ವಿದ್ಯುತ್‌ಗೆ ಅತಿ ಹೆಚ್ಚು ಬೇಡಿಕೆ ಉಂಟಾಗಿದೆ. ದೇಶದ ಕೈಗಾರಿಕೆಗಳು ಸಹ ಪುಟಿದೆದ್ದಿವೆ. ಹೀಗಾಗಿ ಒಮ್ಮೇಲೆ ವಿದ್ಯುತ್‌ಗೆ ಬೇಡಿಕೆ ಹೆಚ್ಚಿದೆ. ದೂರದೂರದ ಪವರ್ ಪ್ಲಾಂಟ್‌ಗಳಲ್ಲಿ ಹತ್ತು ದಿನಕ್ಕಾಗುವಷ್ಟುಕಲ್ಲಿದ್ದಲು ಸಂಗ್ರಹವಿದೆ ಎಂದು ಹೇಳಿದರು.
10 ದಿನಗಳ ನಂತರ ದೇಶ ಸಂಪೂರ್ಣ ಕತ್ತಲಾಗುತ್ತದೆ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅದು ಸರಿಯಲ್ಲ. ಕೇಂದ್ರ ಸರ್ಕಾರ ನಿರಂತರವಾಗಿ ಪ್ರತಿದಿನ 1.07 ಮಿಲಿಯನ್ ಟನ್ ಕಲ್ಲಿದ್ದಲು ಪೂರೈಕೆ ಮಾಡುತ್ತಿದೆ. ಬೇಡಿಕೆ ಒಮ್ಮೇಲೆ ಹೆಚ್ಚಾಗಿದ್ದರಿಂದ ಸಾಗಾಟ ಮಾಡಲು ರೈಲ್ವೆ ಇಲಾಖೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖಾಲಿಯಾದಷ್ಟುಕಲ್ಲಿದ್ದಲನ್ನು ನಿರಂತರವಾಗಿ ತುಂಬಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಲ್ಲಿದ್ದಲಿನ ಸಮಸ್ಯೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.