ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು (ಏ.05): ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಶುಕ್ರವಾರ ಭೇಟಿಯಾಗಿ ಈವರೆಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ನಡೆದಿರುವ ವಿಚಾರಣೆ ಕುರಿತು ಡಿಜಿಪಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ವಿಚಾರಣೆಯಲ್ಲಿ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಪೂರಕವಾದ ಯಾವುದೇ ಪೂರಾವೆಗಳು ಲಭ್ಯವಾಗಿಲ್ಲ.
ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಸಂದರ್ಶಕರ ಪುಸ್ತಕ ಸಹ ಇರಲಿಲ್ಲ. ಹೀಗಾಗಿ ಡಿಜಿಟಲ್ ಸಾಕ್ಷ್ಯಗಳು ಕೂಡ ಪತ್ತೆಯಾಗಿಲ್ಲ ಎಂದು ಡಿಜಿಪಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪ್ರಕರಣ ಸಂಬಂಧ ಸಚಿವ ರಾಜಣ್ಣ ಅವರ ಆಪ್ತ ಸಹಾಯಕ, ವಿಶೇಷಾಧಿಕಾರಿ ಹಾಗೂ ಗನ್ ಮ್ಯಾನ್‌ಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಆದರೆ ಕೃತ್ಯದ ಬಗ್ಗೆ ತಮಗೇನು ಗೊತ್ತಿಲ್ಲವೆಂದು ಅವರು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಚಿವ ರಾಜಣ್ಣ ಅವರ ವಿಚಾರಣೆ ನಡೆಸಬೇಕಿದ್ದು, ಸಚಿವರ ಹೇಳಿಕೆ ಆಧರಿಸಿ ಮುಂದಿನ ವಿಚಾರಣೆ ಮುಂದುವರೆಸಲಾಗುತ್ತದೆ ಎಂದು ಗೃಹ ಮಂತ್ರಿ ಅವರಿಗೆ ಸಲೀಂ ತಿಳಿಸಿರುವುದಾಗಿ ಮೂಲಗಳು ಹೇಳಿವೆ.
ರಾಜಣ್ಣ ದೂರೇ ನೀಡದಿದ್ರೆ ನಾನೇನು ಮಾಡಲಿ?: ಹನಿಟ್ರ್ಯಾಪ್ ಪ್ರಕರಣ ಉನ್ನತ ತನಿಖೆಗೆ ಕೊಡುತ್ತೇನೆ ಎಂದು ಹೇಳಿದ್ದೆ. ಆದರೆ ದೂರೇ ನೀಡದಿದ್ದರೆ ನಾನೇನು ಮಾಡಲಿ? ಎಫ್‌ಐಆರ್ ದಾಖಲಾಗದೆ ಯಾವುದೇ ತನಿಖೆ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಆಪ್ತರ ಜತೆ ಚರ್ಚಿಸಿ ಹನಿಟ್ರ್ಯಾಪ್ ದೂರು ಬಗ್ಗೆ ತೀರ್ಮಾನಿಸುವುದಾಗಿ ರಾಜಣ್ಣ ಹೇಳಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ, ‘ಅವರಿಗೆ ಬಹಳ ಜನ ಆಪ್ತರು ಇದ್ದಾರೆ. ನಾನೂ ಸೇರಿ ಎಲ್ಲರೂ ಅವರಿಗೆ ಆಪ್ತರೇ.
ನನ್ನ, ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಗೃಹ ಸಚಿವ ಪರಮೇಶ್ವರ್
ಯಾವ ಆಪ್ತರ ಬಳಿ ಮಾತನಾಡುತ್ತಾರೋ ನೀವೇ ಅವರನ್ನು ಕೇಳಬೇಕು. ಭಾನುವಾರ ಕಾರ್ಯಕ್ರಮವೊಂದರಲ್ಲಿ ಜತೆಯಲ್ಲೇ ಇದ್ದೆವು. ಅದರ ಬಗ್ಗೆ ನನ್ನ ಬಳಿ ಏನೂ ಮಾತನಾಡಲಿಲ್ಲ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿ, ಹನಿಟ್ರ್ಯಾಪ್ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ಏನೂ ಮಾತನಾಡಲ್ಲ. ಈ ಬಗ್ಗೆ ದೂರು ನೀಡಿದರೆ ತನಿಖೆಗೆ ನೀಡುತ್ತೇನೆ ಎಂದು ಹೇಳಿದ್ದೆ. ಆದರೆ ಅವರು(ರಾಜಣ್ಣ) ದೂರು ಕೊಡಬೇಕಲ್ಲ? ಎಫ್‌ಐಆರ್ ಆಗದೆ ಯಾವುದೇ ತನಿಖೆ ಮಾಡಲು ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.