Badami Development: ಅಭಿವೃದ್ಧಿಗೆ ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಯ್ಯ ಹತ್ರನೂ ಇಲ್ಲ, ಕೇಳೋಕೆ ಬರಬೇಡಿ ಎಂದ ಗೃಹ ಸಚಿವ!

Published : Jun 24, 2025, 08:33 AM ISTUpdated : Jun 24, 2025, 10:49 AM IST
Dr G Parameshwar

ಸಾರಾಂಶ

ಬಾದಾಮಿಯ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಕಾರಣ ಕೇಂದ್ರ ಸರ್ಕಾರದಿಂದ ಹಣ ಪಡೆಯಲು ದೊಡ್ಡ ಯೋಜನೆ ರೂಪಿಸುವಂತೆ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಬಳಿಯೂ ಹಣವಿಲ್ಲ ಎಂದು ಅವರು ಹೇಳಿದ್ದಾರೆ. 

ಬಾಗಲಕೋಟೆ (ಜೂ.24): 'ನಮ್ಮ ಬಳಿ ದುಡ್ಡಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯೂ ದುಡ್ಡಿಲ್ಲ. ಆದ್ದರಿಂದ, ಯಾವುದೇ ಅಭಿವೃದ್ಧಿ ಕೆಲಸಕ್ಕೆ ನಮ್ಮನ್ನು ಕೇಳಬೇಡಿ. ಬದಲಿಗೆ ಒಂದು ದೊಡ್ಡ ಪ್ರಾಜೆಕ್ಟ್ ರೂಪಿಸಿ, ಕೇಂದ್ರ ಸರಕಾರಕ್ಕೆ ಕಳುಹಿಸಿ, ಅವರಿಂದ ದುಡ್ಡು ತನ್ನಿ ಎಂದು ಗೃಹ ಸಚಿವ ಪರಮೇಶ್ವರ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬಾದಾಮಿಯಲ್ಲಿ ಅಭಿವೃದ್ಧಿಯ ಕುರಿತು ಮಾತನಾಡುವ ವೇಳೆಯಲ್ಲಿ ಸಚಿವ ಜಿ. ಪರಮೇಶ್ವರ ಅವರು, ಸ್ಥಳೀಯ ಶಾಸಕ ಭೀಮಸೇನ ಚಿಮ್ಮನಕಟ್ಟಿಗೆ 'ಏನಪ್ಪಾ, ಸಾವಿರ ಕೋಟಿ ಎಂದರೆ ಭಯವಾಗುತ್ತದೆಯಾ? ಸಾವಿರ ಕೋಟಿಯ ಒಂದು ದೊಡ್ಡ ಪ್ರಾಜೆಕ್ಟ್ ಮಾಡಿ, ಕೇಂದ್ರಕ್ಕೆ ಕಳಿಸಿ. ಇದರಿಂದ ಬಾದಾಮಿಯನ್ನು ರಕ್ಷಿಸಿದಂತೆ ಆಗುತ್ತದೆ, ಇನ್ನಷ್ಟು ಸುಂದರವಾಗಿ ಕಾಣುವಂತೆ ಮಾಡಬಹುದು ಎಂದು ಕೀಟಲೆ ರೀತಿಯಲ್ಲಿ ಹೇಳಿದರು.

ಇದೇ ವೇಳೆ, ಹಾಸ್ಯದ ಧಾಟಿಯಲ್ಲಿ ಮಾತನಾಡಿದ ಸಚಿವರು, ನಾವೆಲ್ಲವನ್ನೂ ಕೊಟ್ಟುಬಿಟ್ಟಿದ್ದೇವೆ. ಅಕ್ಕಿ, ಬೇಳೆ, ಎಣ್ಣೆ, ಎಣ್ಣೆ(ಮದ್ಯ) ಕೂಡ ಕೊಟ್ಟುಬಿಟ್ಟಿದ್ದೇವೆ! ಎಂದು ಅಬಕಾರಿ ಸಚಿವ ತಿಮ್ಮಾಪುರ ಕಡೆಗೆ ಕೈ ತೋರಿಸಿ, ಸಭೆಯಲ್ಲಿ ನಗೆಯ ಅಲೆ ಎಬ್ಬಿಸಿದರು.

ಈ ಹೇಳಿಕೆಯಿಂದ ಬಾದಾಮಿಯ ಅಭಿವೃದ್ಧಿಗೆ ಕೇಂದ್ರದಿಂದ ನೆರವು ಪಡೆಯಲು ಒಂದು ದೊಡ್ಡ ಯೋಜನೆಯನ್ನು ರೂಪಿಸುವಂತೆ ಸಚಿವರು ಸ್ಥಳೀಯ ಶಾಸಕರಿಗೆ ಸೂಚಿಸಿದ್ದಾರೆ. ಅಲ್ಲದೇ ಗೃಹ ಸಚಿವ ಜಿ. ಪರಮೇಶ್ವರ ಅವರು ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕೊನೆಗೂ ಹೊರಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!