ಸಂಜೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿತು. ಅಲ್ಲದೆ, ಪ್ರಕರಣ ಸಂಬಂಧ ಯಾವುದಾದರು ಕ್ರಮಕ್ಕೆ ಮುಂದಾದಲ್ಲಿ ತಕ್ಷಣ ನ್ಯಾಯಪೀಠದ ಕದ ತಟ್ಟಬಹುದು ಎಂದು ಪೀಠ ತಿಳಿಸಿದೆ.
ಬೆಂಗಳೂರು(ನ.07): ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ವಿಶೇಷ ಪೊಲೀಸ್ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್ ಸಲ್ಲಿಸಿರುವ ದೂರಿನ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ಸೂಚಿಸಿದ ಹೈಕೋರ್ಟ್ ವಿಚಾರಣೆ ಮುಂದೂಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ಎಂ. ಚಂದ್ರಶೇಖರ್ ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬುಧವಾರ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.
undefined
ಎಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ವಿರುದ್ಧ ಎಫ್‌ಐಆರ್!
ಸಂಜೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿತು. ಅಲ್ಲದೆ, ಪ್ರಕರಣ ಸಂಬಂಧ ಯಾವುದಾದರು ಕ್ರಮಕ್ಕೆ ಮುಂದಾದಲ್ಲಿ ತಕ್ಷಣ ನ್ಯಾಯಪೀಠದ ಕದ ತಟ್ಟಬಹುದು ಎಂದು ಪೀಠ ತಿಳಿಸಿದೆ. ಜತೆಗೆ, ಅಕ್ರಮ ಗಣಗಾರಿಕೆ ಪ್ರಕರಣ ಸಂಬಂಧ ಹತ್ತು ವರ್ಷಗಳ ಹಿಂದೆ ಮಂಜೂರಾದ ನಿರೀಕ್ಷಣಾ ಜಾಮೀನು ರದ್ದುಪಡಿಸುವ ಪ್ರಕ್ರಿಯೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದು ಪೀಠ ಮೌಖಿಕವಾಗಿ ತಿಳಿಸಿತು.