ಸಾರಿಗೆ ಪ್ರಯಾಣ ದರ ಹೆಚ್ಚಳ ಇಲ್ಲ : ಸಚಿವ ರೆಡ್ಡಿ

Kannadaprabha News   | Kannada Prabha
Published : Mar 22, 2026, 06:52 AM IST
Ramalinga reddy

ಸಾರಾಂಶ

ಕೈಗಾರಿಕೆಗಳಿಗೆ ಪೂರೈಸುವ ಡೀಸೆಲ್‌ ದರ 20 ರು. ಹೆಚ್ಚಳದಿಂದಾಗಿ ಸರ್ಕಾರಿ ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಆಗುತ್ತದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ‘ಕೈಗಾರಿಕೆಗಳಿಗೆ ಪೂರೈಸುವ ಡೀಸೆಲ್‌ ದರ ಮಾತ್ರ ಹೆಚ್ಚಿಸಲಾಗಿದೆ. ಹೀಗಾಗಿ ಸದ್ಯಕ್ಕೆ ಬಸ್‌ ಪ್ರಯಾಣ ದರ ಹೆಚ್ಚಳ ಇಲ್ಲ’ ಎಂದು ತಿಳಿಸಿದ್ದಾರೆ.

ಬೆಂಗಳೂರು : ಕೈಗಾರಿಕೆಗಳಿಗೆ ಪೂರೈಸುವ ಡೀಸೆಲ್‌ ದರ 20 ರು. ಹೆಚ್ಚಳದಿಂದಾಗಿ ಸರ್ಕಾರಿ ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಆಗುತ್ತದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ‘ಕೈಗಾರಿಕೆಗಳಿಗೆ ಪೂರೈಸುವ ಡೀಸೆಲ್‌ ದರ ಮಾತ್ರ ಹೆಚ್ಚಿಸಲಾಗಿದೆ. ಹೀಗಾಗಿ ಸದ್ಯಕ್ಕೆ ಬಸ್‌ ಪ್ರಯಾಣ ದರ ಹೆಚ್ಚಳ ಇಲ್ಲ’ ಎಂದು ತಿಳಿಸಿದ್ದಾರೆ.

ಯುದ್ಧದ ಪರಿಣಾಮ ಸಾರಿಗೆ ನಿಗಮಗಳ ಮೇಲೂ ಆಗಲಿದೆ

ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಯುದ್ಧದ ಪರಿಣಾಮ ಸಾರಿಗೆ ನಿಗಮಗಳ ಮೇಲೂ ಆಗಲಿದೆ. ಯುದ್ಧದಿಂದಾಗಿ ಕೈಗಾರಿಕಾ ಡೀಸೆಲ್‌ ಬೆಲೆ ಏರಿಕೆಯಾಗಿದ್ದು, ಅದು ತಾತ್ಕಾಲಿಕ ಎಂಬ ಅಭಿಪ್ರಾಯವಿದೆ. ಹೀಗೆ ಕೈಗಾರಿಕೆಗಳ ತಾತ್ಕಾಲಿಕ ಬೆಲೆ ಹೆಚ್ಚಳದಿಂದಾಗಿ ಬಸ್‌ ಪ್ರಯಾಣ ದರ ಏರಿಕೆ ಮಾಡಲು ಆಗುವುದಿಲ್ಲ’ ಎಂದರು.

ಪರಿಸ್ಥಿತಿ ಸುಧಾರಿಸಿದರೆ ಸಾಮಾನ್ಯವಾಗಿ ಡೀಸೆಲ್‌ ಬೆಲೆಯೂ ಇಳಿಕೆ

‘ಒಂದು ವೇಳೆ ಯುದ್ಧ ಸ್ಥಗಿತಗೊಂಡು, ಪರಿಸ್ಥಿತಿ ಸುಧಾರಿಸಿದರೆ ಸಾಮಾನ್ಯವಾಗಿ ಡೀಸೆಲ್‌ ಬೆಲೆಯೂ ಇಳಿಕೆಯಾಗಬಹುದು. ಆಗ ಪ್ರಯಾಣ ದರ ಮತ್ತೆ ಇಳಿಕೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಬಸ್‌ ಪ್ರಯಾಣ ದರ ಏರಿಕೆಯ ಯಾವುದೇ ಚಿಂತನೆ ನಮ್ಮ ಮುಂದೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಕಾವೇರಿದ ಉಪಚುನಾವಣೆ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ ಸೀಜ್
ಮುಸ್ಲಿಮರ ಮನವೊಲಿಸಿದ ಕಾಂಗ್ರೆಸ್‌ ನಾಯಕರು, ದಾವಣಗೆರೆಗೆ ಸಮರ್ಥ್‌ ಶಾಮನೂರು, ಉಮೇಶ್‌ ಮೇಟಿಗೆ ಬಾಗಲಕೋಟೆ ಟಿಕೆಟ್‌ ಫಿಕ್ಸ್‌!