ರಾಜ್ಯ ಸಚಿವ ಸಂಪುಟ ಅಂತ್ಯವಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರು: (ಮೇ. 04): ಕರ್ನಾಟಕದಲ್ಲಿ ಲಾಕ್‌ಡೌನ್ ಇಲ್ಲ. ಮೇ. 12 ರ ವರೆಗೆ ಮಾತ್ರ ಜನತಾ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಹೆಚ್ಚಾಗ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು (ಮಂಗಳವಾರ) ತುರ್ತು ಸಚಿವ ಸಂಪುಟ ಸಭೆ ನಡೆಸಿದರು.
'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಇಲ್ಲ. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ಸಚಿವರ ತಂಡ ರಚನೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸಹ ಲಾಕ್‌ಡೌನ್ ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆ ಮಾಡಲು ಸಿಎಂ ವಿಶೇಷ ಸಚಿವ ಸಂಪುಟ ಕರೆದಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದ್ದವು. ಆದ್ರೆ, ಇದೀಗ ಸಿಎಂ ಲಾಕ್‌ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.