ಬೆಂಗಳೂರಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ

Kannadaprabha News   | Asianet News
Published : Jun 26, 2020, 08:21 AM IST
ಬೆಂಗಳೂರಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ

ಸಾರಾಂಶ

ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಕ್‌ಡೌನ್‌ ಹೇರುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು(ಜೂ.26): ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಕ್‌ಡೌನ್‌ ಹೇರುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್‌ ನಿಯಂತ್ರಣ ಹಿನ್ನೆಲೆಯಲ್ಲಿ ನಡೆದ ತುರ್ತು ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಾಕ್‌ಡೌನ್‌ ಜಾರಿಗೊಳಿಸಿದರೆ ಶ್ರಮಿಕ ವರ್ಗಕ್ಕೆ ಮತ್ತಷ್ಟುತೊಂದರೆಯಾಗುವ ಸಾಧ್ಯತೆ ಇದೆ. ಬಡ ವರ್ಗದವರಿಂದ ಲಾಕ್‌ಡೌನ್‌ ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಡವರ ಪರವಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾದೊಂದಿಗೆ ನಾವು ಮುಂದುವರಿಯಬೇಕಾದ ಅನಿಯವಾರ್ಯತೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.

ನಿಯಮ ಪಾಲಿಸಿ- ಸಿಎಂ:

ಮತ್ತೊಮ್ಮೆ ಲಾಕ್‌ಡೌನ್‌ ಆಗಬಾರದು ಎಂದಾದರೆ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೋವಿಡ್‌-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದರೂ ಕೆಲವರು ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಳೆಯಬ್ಬರಕ್ಕೆ ಉಕ್ಕಿದ ವೃಷಭಾವತಿ: ರಸ್ತೆ ಮೇಲೆ 5 ಅಡಿ ಎತ್ತರಕ್ಕೆ ಹರಿದ ನೀರು

ದೇಶದ ಇತರೆ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರು ಮಾದರಿ ನಗರವಾಗಿದೆ. ರಾಜ್ಯದಲ್ಲಿ ಕೋವಿಡ್‌ ಸೋಂಕು ತಡೆಗಟ್ಟುವಲ್ಲಿ ನಿಯಂತ್ರಣ ತಪ್ಪಿಲ್ಲ. ಹತ್ತಾರು ದಿನಗಳಿಂದ ಸೋಂಕು ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು ಸಂಪೂರ್ಣ ಕ್ರಮ ಕೈಗೊಳ್ಳಲಾಗಿದೆ. ಸೋಂಕು ನಿಯಂತ್ರಣಕ್ಕೆ ಬರಬೇಕೆಂದರೆ ಜನರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್‌ ನಿಯಮಗಳನ್ನು ಪಾಲನೆ ಮಾಡಬೇಕು. ಸರ್ಕಾರದ ಕ್ರಮಕ್ಕೆ ಸ್ಪಂದಿಸಬೇಕು. ಸಾರ್ವಜನಿಕರು ಅನಗತ್ಯವಾಗಿ ರಸ್ತೆಗಿಳಿಯಬಾರದು ಎಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣ ಬಂದಿರುವ ಕೆಲ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಲಾಕ್‌ಡೌನ್‌ ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!