ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯ: ಮತ್ತೆ ಲಾಕ್‌ಡೌನ್‌ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಸುಧಾಕರ್

By Suvarna NewsFirst Published Jul 4, 2020, 5:24 PM IST
Highlights

ಕೊರೋನಾ ನಿಯಂತ್ರಣ ವಿಚಾರವಾಗಿ ಸಿಎಂ ನೇತೃತ್ವದಲ್ಲಿ ನಡೆದಿದ್ದು ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಸಚಿವ ಸುಧಾಕರ್ ಅವರು ಮಾಧ್ಯಮಗಳೊಂದಿಗೆ  ಹಂಚಿಕೊಂಡಿದ್ದು, ಮತ್ತೆ ಲಾಕ್‌ಡೌನ್‌ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ..

ಬೆಂಗಳೂರು, (ಜುಲೈ. 04): ಸಿಎಂ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿದ್ದ ಟಾಸ್ಕ್ ಫೋರ್ಸ್ ಕಮಿಟಿ ಸಭೆ ಅಂತ್ಯವಾಗಿದ್ದು, ಕೊರೋನಾಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಸಭೆಯಲ್ಲಿ ಚರ್ಚೆ ಆಗಿದೆ.

ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಡಾ. ಸುಧಾಕರ್, ಲಾಕ್ ಡೌನ್ ಬಗ್ಗೆ ಸಹ ಚರ್ಚೆ ಆಗಿದ್ದು, ಕೊರೋನಾ ತಡೆಯಲು ಲಾಕ್ ಡೌನ್ ಪರಿಹಾರ ಅಲ್ಲ ಅಂತಾನೂ ಸಭೆಯಲ್ಲಿ ಚರ್ಚೆ ಆಗಿದೆ. ಹೀಗಾಗಿ ಲಾಕ್ ಡೌನ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

24 ಗಂಟೆಗಳಲ್ಲಿ 16 ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿನ ಸುನಾಮಿ..!

ಭಾನುವಾರ ಮಾತ್ರ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಸಿಎಂ ಮುಂದಿನ ಸೂಚನೆ ನೀಡುವ ತನಕ ಸಂಡೆ ಲಾಕ್ ಡೌನ್ ಮುಂದುವರಿಯುತ್ತದೆ ಎಂದು ತಿಳಿಸಿದರು.

ದಕ್ಷಿಣ ಬೆಂಗಳೂರಿನಲ್ಲಿ ಹೆಚ್ಚಿನ ಸೋಂಕಿತರು ಇದ್ದಾರೆ. ಇದರಿಂದ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಇಂತಹ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಸೀಲ್‌ ಡೌನ್ ಮಾಡಿ ಅಂತ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಗಿದ ಬಳಿಕ ಮತ್ತೊಮ್ಮೆ ಲಾಕ್‌ಡೌನ್ ಮಾಡುವ ಸಾಧ್ಯತೆಗಳಿವೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೇ ಸ್ವತಃ ಸಚಿವರುಗಳಾದ ಶ್ರೀರಾಮುಲು ಮತ್ತು ಆರ್. ಅಶೋಕ್ ಮತ್ತೆ ಲಾಕ್‌ಡೌನ್ ಬಗ್ಗೆ ಮಾಧ್ಯಮಗಳಿಗೆ ಸುಳಿವು ಕೊಟ್ಟಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಫಿಕ್ಸ್ ಎಂದು ಭಾವಿಸಲಾಗಿತ್ತು. ಆದ್ರೆ, ಇದೀಗ ಸಚಿವ ಡಾ ಸುಧಾಕರ್ ಲಾಕ್‌ಡೌನ್ ಗೊಂದಲಗಳಿಗೆ ತೆರೆ ಎಳೆದರು.

click me!