‘ಮುಸ್ಲಿಂ ಮತ ಬೇಡ’ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

By Kannadaprabha NewsFirst Published Dec 2, 2023, 4:37 AM IST
Highlights

ಕಳೆದ ವಿಧಾನಸಭೆ ಚುನಾವಣೆ ವೇಳೆ ‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

 ಬೆಂಗಳೂರು (ಡಿ.2): ಕಳೆದ ವಿಧಾನಸಭೆ ಚುನಾವಣೆ ವೇಳೆ ‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಕೆ.ಎಸ್. ಈಶ್ವರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.

Latest Videos

 

ರಾಜ್ಯ ಸರ್ಕಾರ ಪಾಕ್‌ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?: ಕೆ.ಎಸ್.ಈಶ್ವರಪ್ಪ

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಶಿವಮೊಗ್ಗದ ಮನೆ ಆವರಣದಲ್ಲಿ 2023ರ ಏ.25ರಂದು ವೀರಶೈವ ಲಿಂಗಾಯತ ಸಮುದಾಯದ ಸಭೆ ನಡೆದಿತ್ತು. ಈ ವೇಳೆ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗದಲ್ಲಿ 50ರಿಂದ 55 ಸಾವಿರ ಮುಸ್ಲಿಂ ಮತದಾರರಿದ್ದಾರೆ. ಆದರೆ, ನಮಗೆ ಒಂದೇ ಒಂದು ಮುಸ್ಲಿಂ ಮತ ಬೇಡ ಎಂದು ಹೇಳಿದ್ದರು.

ಕುಟುಂಬ ರಾಜಕಾರಣದ ಬಗ್ಗೆ ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್‌ಗಿದೆಯಾ?: ಕೆಎಸ್ ಈಶ್ವರಪ್ಪ ಪ್ರಶ್ನೆ

ಈ ಹೇಳಿಕೆ ಸುದ್ದಿ ಸುದ್ದಿವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು. ಅದನ್ನು ಆಧರಿಸಿ ಚುನಾವಣಾಧಿಕಾರಿಯು ಮೇ 6ರಂದು ವಿನೋಬಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಲು ವಿನೋಬಾನಗರ ಪೊಲೀಸರಿಗೆ ಶಿವಮೊಗ್ಗ ಜೆಎಂಎಫ್‌ಸಿ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ, ಮೇ 8ರಂದು ಧಾರ್ಮಿಕ ಮತ್ತು ಜನಾಂಗೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣವು ಡಿ.2ಕ್ಕೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ನಿಗದಿಯಾಗಿತ್ತು. ಇದೀಗ ಹೈಕೋರ್ಟ್‌, ಪ್ರಕರಣ ಕುರಿತ ಎಫ್‌ಐಆರ್‌ ಮತ್ತು ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿದೆ.

click me!