
ವಿಧಾನಪರಿಷತ್ತು (ಜು.21) : ರಾಜ್ಯದಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಪ್ರಮಾಣಕ್ಕಿಂತ ಹೆಚ್ಚಿನ ಅಂತ್ಯೋದಯ, ಆದ್ಯತಾ ಪಡಿತರ ಚೀಟಿ ವಿತರಿಸಲಾಗಿದ್ದು, ಆ ಹಿನ್ನೆಲೆಯಲ್ಲಿ ಹೊಸದಾಗಿ ಪಡಿತರ ಚೀಟಿ ವಿತರಣೆಗೆ ಆರ್ಥಿಕ ಇಲಾಖೆ ಜತೆಗೆ ಸಮಾಲೋಚಿಸಿ ಅನಂತರ ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ, ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಪೈಕಿ 2.95 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ ಇದೆ. ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ 14.36 ಲಕ್ಷ ಅಂತ್ಯೋದಯ ಪಡಿತರ ಚೀಟಿಗಳನ್ನು ವಿತರಿಸಲಾಗಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾರ್ಡ್ ನೀಡುವ ಅವಕಾಶವಿಲ್ಲ. ಆದರೂ, ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದರು.
ಬಿಪಿಎಲ್ ಪಡಿತರ ಕಾರ್ಡ್‌ಗೆ ಬಡವರ ಪರದಾಟ: ಸರ್ಕಾರಿ ಆಸ್ಪತ್ರೆಯ ಸೌಲಭ್ಯಗಳಿಂದಲೂ ವಂಚಿತ
ರಾಷ್ಟ್ರೀಯ ಅಹಾರ ಭದ್ರತಾ ಕಾಯ್ದೆ ಅನ್ವಯ ನಗರ ಪ್ರದೇಶದಲ್ಲಿ ಶೇ.50ರಷ್ಟುಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ.75ರಷ್ಟುವಾಸಿಗಳು ಅಂತ್ಯೋದಯ ಅನ್ನ ಯೋಜನೆ ಅಥವಾ ಆದ್ಯತಾ ಪಡಿತರ ಚೀಟಿಯನ್ನು ಹೊಂದಲು ಅರ್ಹರಿರುತ್ತಾರೆ. ರಾಜ್ಯದಲ್ಲಿ ಒಟ್ಟು 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ವಿತರಿಸಲಾಗಿದ್ದು, ಇದರಲ್ಲಿ 44,77,231 ಫಲಾನುಭವಿಗಳಿದ್ದಾರೆ. 1.02 ಕೋಟಿ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, ಇದರಲ್ಲಿ 3.57 ಕೋಟಿ ಫಲಾನುಭವಿಗಳಿದ್ದಾರೆ.
ಕೇಂದ್ರ ಸರ್ಕಾರ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಯನ್ನು ನಿಗದಿ ಮಾಡಿರುವ ಮಾನದಂಡದ ಅಡಿಯಲ್ಲಿ ಹೆಚ್ಚುವರಿಯಾಗಿ 14.36 ಲಕ್ಷ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, ಇದರಲ್ಲಿ 39 ಲಕ್ಷ ಫಲಾನುಭವಿಗಳಿದ್ದಾರೆ. ಅನರ್ಹರು ಹೊಂದಿರುವ ಪಡಿತರ ಚೀಟಿಯನ್ನು ಪತ್ತೆಹಚ್ಚಿ ರದ್ದುಪಡಿಸಲಾಗುತ್ತಿದೆ. ಆದಾಯ ತೆರಿಗೆ ಪಾವತಿದಾರರು, ಜಿಎಸ್‌ಟಿ ಮತ್ತು ವೃತ್ತಿ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರು, 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರನ್ನು ಪತ್ತೆಹಚ್ಚಿ ಅವರಿಗೆ ನೀಡಲಾಗಿರುವ ಆದ್ಯತಾ ಪಡಿತರ ಚೀತಿಯನ್ನು ಆದ್ಯತೇತರ ಪಡಿತರ ಚೀಟಿಗಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಅನರ್ಹರಿಂದ ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಬಡವರ ಹೊಟ್ಟೆ ನೋಡಲಿಲ್ಲ: ಸಚಿವ ಮುನಿಯಪ್ಪ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ