ರಾಜ್ಯದಲ್ಲಿ ನೈಟ್‌ ಕರ್ಫ್ಯೂ, ಲಾಕ್‌ಡೌನ್ ಇಲ್ಲ: ಆದ್ರೆ ಕೇಂದ್ರದಿಂದ 3 ಪ್ರಮುಖ ಸಲಹೆ!

By Suvarna News  |  First Published Mar 17, 2021, 3:04 PM IST

ಸಕೊರೋನಾ ಪ್ರಕರಣಗಳು ಗಣನೀಯವಾಗಿ ಏರಿಕೆ| ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸಿಎಂಗಳ ಜೊತೆ ಪಿಎಂ ಸಭೆ| ಸಭೆ ಬಳಿಕ ಬಿಎಸ್‌ವೈ ಸುದ್ದಿಗೋಷ್ಠಿ| ರಾಜ್ಯದಲ್ಲಿ ನೋ ನೈಟ್‌ ಕರ್ಫ್ಯೂ, ನೋ ಲಾಕ್‌ಡೌನ್ ಎಂದ ಸಿಎಂ


ಬೆಂಗಳೂರು(ಮಾ.17): ಕರ್ನಾಟಕ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಗಣನೀಯವಾಗಿ ಏರುತ್ತಿರುವ ಹಿನ್ನೆಲೆ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ಎಲ್ಲಾ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ಹಾಗೂ ಕೊರೋನಾ ಎರಡನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಸಿಎಂ ಬಿ. ಎಸ್. ಯುಡಿಯೂರಪ್ಪ ಸಭೆಯಲ್ಲಿ ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳ ಕುರಿತು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಸೀಲ್‌ಡೌನ್‌, ನೈಟ್‌ ಕರ್ಫ್ಯೂ ಹಾಗೂ ಲಾಕ್‌ಡೌನ್ ಹೇರುವುದಿಲ್ಲ ಎಂಬುವುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ಮೂಲಕ ಲಾಕ್‌ಡೌನ್, ಬನೈಟ್‌ ಕರ್ಫ್ಯೂ ಹೇರುತ್ತಾರೆಂಬ ವದಂತಿಗೆ ತೆರೆ ಬಿದ್ದಿದೆ. ಆದರೆ ಇದೇ ಸಂದರ್ಭದಲ್ಲಿ ಕೇಂದ್ರ ಮುಖ್ಯವಾಗಿ ಪಾಲಿಸುವಂತೆ ತಿಳಿಸಿದ ಮೂರು ಪ್ರಮುಖ ಸಲಹೆಗಳ ಬಗ್ಗೆಯೂ ತಿಳಿಸಿದ್ದಾರೆ.

Tap to resize

Latest Videos

undefined

ಕೇಂದ್ರದಿಂದ ಮೂರು ಪ್ರಮುಖ ಸಲಹೆ:

ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಸಾಮಾಜಿಕ ಅಂತರ, ಇನ್ ಡೋರ್ ಕಾರ್ಯಕ್ರಮಗಳ ಬಗ್ಗೆ ಎಚ್ಚರ ಹಾಗೂ ಸಿನಿಮಾ ಹಾಲ್ ಗಳಲ್ಲಿ ಈಗಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು.ಎಂದಿದ್ದಾರೆ. ಜೊತೆಗೆ ಕರ್ನಾಟಕದ ಬೆಂಗಳೂರು, ಬೀದರ್ ಹಾಗೂ ಕಲಬುರ್ಗಿ ಈ ಮೂರು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಹೆಚ್ಚಿನ ನಿಗಾ ವಹಿಸುವಂತೆಯೂ ಕೇಂದ್ರ ತಿಳಿಸಿದೆ ಎಂದಿದ್ದಾರೆ.

ನೈಟ್ ಕರ್ಪ್ಯೂ, ಸೀಲ್‌ಡೌನ್ ಇಲ್ಲ

ಇನ್ನು ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅಡ್ಡಿ ಇಲ್ಲ. ನೈಟ್ ಕರ್ಪ್ಯೂ, ಸೀಲ್‌ಡೌನ್ ಇಲ್ಲ ಎಂದಿರುವ ಸಿಎಂ ಯಡಿಯೂರಪ್ಪ ಕಳೆದ ಹತ್ತು ದಿನಗಳಲ್ಲಿ ಕೊರೋನಾ ಏರಿಕೆಯಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡುತ್ತಿದ್ದು, ಜನ ಸೇರುವ ಕಡೆ ಮುನ್ನೆಚ್ಚರಿಕೆಗೆ ಸೂಚನೆ ನೀಡುತ್ತೇವೆ. ಅಲ್ಲದೇ ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ. 

ಇನ್ನುಳಿದಂತೆ Test, Track, Treatment ಬಗ್ಗೆ ಪಿಎಂ ಗಮನಕ್ಕೆ ತಂದಿದ್ದಾರೆ. ಲಸಿಕೆ ಹಾಳಾಗದಂತೆ ನೋಡಿಕೊಳ್ಳುವಂತೆ ಈ ವೇಳೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಮನವಿ ಮಾಡಿಕೊಂಡಿದೆ. ಅಲ್ಲದೇ ಮೈಕ್ರೋ ಕಂಟ್ನೋಮ್ಮೆಂಟ್ ಜೋನ್ ಕಡೆ ಗಮನ ಹರಿಸಲೂ ಕೇಂದ್ರ ಸೂಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ. ಹೀಗಿರುವಾಗ ರಾಜ್ಯವೂ ಅಪಾರ್ಟ್ಮೆಂಟ್ ಸೇರಿ ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ಲಸಿಕೆ ಹಾಕಿಸಲು ಅವಕಾಶ ಕೊಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ ಎಂದಿದ್ದಾರೆ.

click me!