
ಸುವರ್ಣ ವಿಧಾನಸೌಧ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾದರಿಯಲ್ಲಿಯೇ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಅನುಕೂಲವಾಗಲಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ದೊರೆಯಲಿದೆ.
ಸುಪ್ರೀಂಕೋರ್ಟ್ ಆದೇಶದಿಂದ ಸಿಸಿ, ಒಸಿಯಿಲ್ಲದ ಮನೆ ನಿರ್ಮಿಸಿರುವವರಿಗೆ ಮೂಲಸೌಕರ್ಯ ನೀಡಲು ಸರ್ಕಾರಕ್ಕೆ ಸಮಸ್ಯೆ ಎದುರಾಗಿತ್ತು. ಅದನ್ನು ನಿವಾರಿಸುವ ಸಲುವಾಗಿ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯಿತಿಗಳ, ತಾಲೂಕು ಪಂಚಾಯತಿಗಳ ಮತ್ತು ಗ್ರಾಮ ಪಂಚಾಯಿತಿಗಳ ನಿಯಂತ್ರಣ (ಎರಡನೇ ತಿದ್ದುಪಡಿ) ಮಾದರಿ ಉಪ ವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ