ಶಾದಿ ಮಹಲ್‌ ಬಿಟ್ಟು ಅಲ್ಪಸಂಖ್ಯಾತರ ಬೇರೆ ಸ್ಕೀಂ ರದ್ದಿಲ್ಲ: ಸಿಎಂ ಬೊಮ್ಮಾಯಿ

By Girish Goudar  |  First Published Mar 25, 2022, 7:10 AM IST

*  ಹೊಸ ಯೋಜನೆ ಜಾರಿಗೊಳಿಸಿ, ವಿವಿಧ ಯೋಜನೆಗಳಿಗೆ ಹೆಚ್ಚು ಹಣ ಕೊಟ್ಟಿದ್ದೇವೆ
*  ಕಾಲೋನಿಗಳ ಅಭಿವೃದ್ಧಿಗೆ ವಿಶೇಷ ಕ್ರಮ
* ಗಂಗಾ ಕಲ್ಯಾಣ ಯೋಜನೆ ಸ್ಥಗಿತಗೊಳಿಸಿಲ್ಲ 


ಬೆಂಗಳೂರು(ಮಾ.25): ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಪಟ್ಟಂತೆ ಶಾದಿ ಮಹಲ್‌ ಯೋಜನೆ(Shadi Mahal Project) ಹೊರತುಪಡಿಸಿ ಬೇರೆ ಯಾವುದೇ ಯೋಜನೆ ಸ್ಥಗಿತಗೊಳಿಸಿಲ್ಲ. ಬದಲಾಗಿ ಹೊಸ ಯೋಜನೆ ಜಾರಿ ಜೊತೆಗೆ ವಿವಿಧ ಯೋಜನೆಗಳಿಗೆ ಹೆಚ್ಚಿನ ಹಣ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌(Congress) ಪಕ್ಷದ ಸಿ.ಎಂ. ಇಬ್ರಾಹಿಂ(CM Ibrahim) ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗಂಗಾ ಕಲ್ಯಾಣ ಯೋಜನೆ ಸ್ಥಗಿತಗೊಳಿಸಿಲ್ಲ. ಈ ಮೊದಲು 1.50 ಲಕ್ಷ ರು. ನೀಡುತ್ತಿದ್ದ ಮೊತ್ತವನ್ನು 2 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ. ಜೂನ್‌ ತಿಂಗಳಿಂದ ಕೊಳವೆಬಾವಿ ಕೊರೆಯಲು ಅನುಮತಿ ನೀಡಲಾಗಿದೆ. ಈ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗುತ್ತಿದ್ದ ಕಾರಣ ಟೆಂಡರ್‌ ನೀಡುವ ಪದ್ಧತಿಯನ್ನು ಬಿಟ್ಟು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಕೊಳವೆ ಬಾವಿ ಕೊರೆಯುವ, ವಿದ್ಯುತ್‌ ಸಂಪರ್ಕ ಪಡೆಯುವ ವೇಳೆ 2-3 ಕಂತುಗಳಲ್ಲಿ ಹಣ ನೀಡಲಾಗುವುದು ಎಂದರು.

Tap to resize

Latest Videos

Bommai Cabinet ಕರ್ನಾಟಕ ಸಂಪುಟ ಸರ್ಜರಿ ಸದ್ಯಕ್ಕಿಲ್ಲ, ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಡಾ.ಎಪಿಜೆ ಅಬ್ದುಲ್‌ ಕಲಾಂ ಅವರ ಹೆಸರಿನಲ್ಲಿ ಜಿಲ್ಲೆಗೊಂದು ಸಿಬಿಎಸ್‌ಇ ಪಠ್ಯಕ್ರಮದ ಶಾಲೆ ತೆರೆಯಲು 22 ಕೋಟಿ ರು., ಅಲ್ಪಸಂಖ್ಯಾತ ಸಮುದಾಯ ಸ್ಪರ್ಧಾತ್ಮಕ ಪರೀಕ್ಷೆ(Competitive Exam) ಎದುರಿಸಲು 50 ಸಾವಿರ ವಿದ್ಯಾರ್ಥಿಗಳಿಗೆ(Students) ತರಬೇತಿ ನೀಡಲು 110 ಕೋಟಿ ರು. ನೀಡಲಾಗುವುದು. ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್‌ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರತಿ ಹಾಸ್ಟೆಲ್‌ಗೆ ಹೆಚ್ಚುವರಿಯಾಗಿ 25 ಮಕ್ಕಳ ಸೇರ್ಪಡೆಗೆ ಅವಕಾಶ ಕಲ್ಪಿಸಿ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗಿದೆ.

ವಿದ್ಯಾಭ್ಯಾಸಕ್ಕೆ ಸಾಲ(Study Loan) ನೀಡುವ ‘ಅರಿವು’ ಯೋಜನೆಯಡಿ ಕಳೆದ ಬಾರಿಗಿಂತ ಹೆಚ್ಚು ಅನುದಾನ ಕೊಡಲಾಗುತ್ತಿದೆ. ಸ್ನಾತಕೋತ್ತರ, ವೃತ್ತಿಪರ ಕೋರ್ಸ್‌ ವಿದ್ಯಾರ್ಥಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿತ್ತು, ಈ ವರ್ಷದಿಂದ ಬಿಎ, ಬಿಕಾಂ ವಿದ್ಯಾರ್ಥಿಗಳಿಗೂ ಸಾಲ ಸೌಲಭ್ಯ ನೀಡಲಾಗುತ್ತಿದೆ. ಅದೇ ರೀತಿ ಬೀದಿ ಬದಿ ವ್ಯಾಪಾರಿಗಳಿಗೆ ವಿಶೇಷ ಅಲ್ಪಸಂಖ್ಯಾತ ಸಮುದಾಯಕ್ಕೆ ‘ನಮ್‌ರ್‍’ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿವರಿಸಿದರು.

ಕಾಲೋನಿಗಳ ಅಭಿವೃದ್ಧಿಗೆ ವಿಶೇಷ ಕ್ರಮ:

ನಗರಸಭೆ, ಪುರಸಭೆಗಳಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಕೊಳಗೇರಿ ಎಂದು ಪರಿಗಣಿಸಿ ಅಭಿವೃದ್ಧಿ ಮಾಡಲು ವಿಶೇಷ ಅನುದಾನ ನೀಡಲಾಗುವುದು ಎಂದು ಕಾಂಗ್ರೆಸ್‌ನ ನಜೀರ್‌ ಅಹಮದ್‌ ಅವರಿಗೆ ಮುಖ್ಯಮಂತ್ರಿಗಳು ಉತ್ತರಿಸಿದರು.

Belgaum Files: ಕನ್ನಡಿಗರನ್ನು ಕೆಣಕಿದ ಸಂಜಯ್ ರಾವತ್ ಗೆ ಸಿಎಂ ಬೊಮ್ಮಾಯಿ ತಿರುಗೇಟು

ಪಿಎಚ್‌ಡಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ನೆರವನ್ನು ಸ್ಥಗಿತಗೊಳಿಸಲಾಗಿತ್ತು. ತಾವು ಅಧಿಕಾರಕ್ಕೆ ಬಂದ ನಂತರ ಪುನರಾರಂಭಿಸಲಾಗಿದೆ. ಆದರೆ ವಿದೇಶಗಳಲ್ಲಿ ವ್ಯಾಸಂಗ ಮಾಡುವವರಿಗೆ 24 ಲಕ್ಷ ರು. ನೀಡುತ್ತಿದ್ದ ಕಾರ್ಯಕ್ರಮ ಪುನಃ ಜಾರಿಗೆ ಪರಿಶೀಲಿಸಲಾಗುವುದು ಎಂದು ಅವರು ಸಲೀಂ ಅಹವåದ್‌ ಅವರ ಪ್ರಶ್ನೆಗೆ ಉತ್ತರಿಸಿದರು.

ಕಾಫಿ ಬೆಳೆಗಾರಿಗೂ ಸಬ್ಸಿಡಿ ವಿದ್ಯುತ್‌:

ಕಾಫಿ ಬೆಳೆಗಾರರಿಗೆ(Coffee Growers) ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಕೃಷಿ ಪಂಪ್‌ಸೆಟ್‌ ಬಳಸುವ ರೈತರಿಗೆ ನೀಡುವಂತೆ ಕಾಫಿ ಬೆಳೆಗಾರರಿಗೂ ಕೆಲವು ಷರತ್ತುಗಳೊಂದಿಗೆ 10 ಎಚ್‌ಪಿವರೆಗೆ ಸಬ್ಸಿಡಿ ದರದಲ್ಲಿ ವಿದ್ಯುತ್‌ ಪೂರೈಕೆ ಮಾಡಲು ಸರ್ಕಾರವು ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದರು. 

ಮಂಗಳವಾರ ಶೂನ್ಯವೇಳೆಯಲ್ಲಿ ಜೆಡಿಎಸ್‌(JDS) ಸದಸ್ಯ ಎ.ಟಿ.ರಾಮಸ್ವಾಮಿ ಮತ್ತು ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್‌ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿ(BJP) ಸದಸ್ಯರಾದ ಸಿ.ಟಿ.ರವಿ, ಎಂ.ಪಿ.ಕುಮಾರಸ್ವಾಮಿ, ಕೆ.ಜಿ.ಬೋಪಯ್ಯ ಸೇರಿದಂತೆ ಇತರರು ಧ್ವನಿಗೂಡಿಸಿದರು. ಕಾಫಿ ನಾಡಿನ ಶಾಸಕರ ಒತ್ತಾಯಕ್ಕೆ ಮಣಿದ ಮುಖ್ಯಮಂತ್ರಿಗಳು ಸದನದಲ್ಲಿ ಕೆಲವು ಷರತ್ತುಗಳೊಂದಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್‌ ಪೂರೈಕೆ ಮಾಡಲು ಸಿದ್ಧವಿದೆ ಎಂದು ಪ್ರಕಟಿಸಿದ್ದರು. 
 

click me!