ಸರ್ಕಾರಿ ಆಸ್ಪತ್ರೆ ಸುತ್ತ ಮೆಡಿಕಲ್‌ ಸ್ಟೋರ್‌ ತೆರೆಯಂಗಿಲ್ಲ

By Kannadaprabha NewsFirst Published Nov 8, 2020, 7:45 AM IST
Highlights

ಆಸ್ಪತ್ರೆ ಸುತ್ತ ಮುತ್ತ ಮೆಡಿಕಲ್ ಶಾಪ್ ಗಳನ್ನು ತೆರೆಯುವಂತಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಸೂಚನೆ ನೀಡಿದ್ದಾರೆ. 

ಚಿಕ್ಕಮಗಳೂರು (ನ.08): ಸರ್ಕಾರಿ ಆಸ್ಪತ್ರೆಯ 100 ಮೀಟರ್‌ ಸುತ್ತಳತೆಯಲ್ಲಿ ಯಾವುದೇ ಖಾಸಗಿ ಮೆಡಿಕಲ್‌ ಸ್ಟೋರ್‌ಗಳನ್ನು ತೆರೆಯಲು ಅನುಮತಿ ನೀಡಬಾರದೆಂಬ ಆದೇಶ ಹೊರಡಿಸಲು ಸರ್ಕಾರ ಚಿಂತಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

ನಗರದಲ್ಲಿ ಮಾತನಾಡಿದ ಅವರು, ಅದೇ ರೀತಿ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಆಸ್ಪತ್ರೆಯ 200 ಮೀಟರ್‌ ವ್ಯಾಪ್ತಿಯಲ್ಲಿ ಖಾಸಗಿ ಮೆಡಿಕಲ್‌ ಸ್ಟೋರ್‌ಗಳ ಮಳಿಗೆಗಳನ್ನು ತೆರೆಯಲು ಪರವಾನಗಿ ನೀಡದಿರಲು ಉದ್ದೇಶಿಸಲಾಗಿದೆ.

108 ಆ್ಯಂಬ್ಯುಲೆನ್ಸ್‌ ಸೇವೆ ಆಮೂಲಾಗ್ರ ಬದಲಾವಣೆ: ಸಚಿವ ಸುಧಾಕರ್‌

 ಈ ಆದೇಶ ಮುಂದಿನ ದಿನಗಳಲ್ಲಿ ಅನ್ವಯವಾಗಲಿದ್ದು, ಈಗಾಗಲೇ ಆಸ್ಪತ್ರೆ ಸಮೀಪದಲ್ಲಿರುವ ಖಾಸಗಿ ಔಷಧಿ ಅಂಗಡಿಗಳ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಇದೇ ವೇಳೆ ರಾಜ್ಯದಲ್ಲಿ 2500ಕ್ಕೂ ಹೆಚ್ಚು ವೈದ್ಯರ ನೇರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ನವೆಂಬರ್‌ ಅಂತ್ಯಕ್ಕೆ ಈ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದರು.

click me!