
ಬೆಂಗಳೂರು(ಮೇ.11): ದೇಶದಲ್ಲಿ ನೆಲೆಸಿರುವ ವಿದೇಶಿ ಕಾರ್ಮಿಕರನ್ನು ನೌಕರರ ಭವಿಷ್ಯ ನಿಧಿ (ಇಪಿಎಫ್) ಮತ್ತು ನೌಕರರ ಪಿಂಚಣಿ (ಇಪಿ) ಯೋಜನೆ ವ್ಯಾಪ್ತಿಗೆ ಒಳಪಡಿಸಿ ಕೇಂದ್ರ ಸರ್ಕಾರ 2008ರಲ್ಲಿ ಜಾರಿಗೊಳಿಸಿದ್ದ ತಿದ್ದುಪಡಿ ಕಾನೂನು ಅಸಂವಿಧಾನಿಕ ಎಂದು ಹೈಕೋರ್ಟ್ ಘೋಷಿಸಿದೆ.
ತಿದ್ದುಪಡಿ ಕಾನೂನು ಪ್ರಶ್ನಿಸಿ ಸ್ಟೋನ್ ಹಿಲ್ ಎಜುಕೇಷನ್ ಫೌಂಡೇಷನ್ ಸೇರಿದಂತೆ ಹಲವು ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಹೇಮ ಲೇಖಾ ಅವರ ಪೀಠ ಈ ಆದೇಶ ಮಾಡಿ ತಿದ್ದುಪಡಿ ಕಾನೂನನ್ನು ರದ್ದುಪಡಿಸಿದೆ.
ಪೆಪ್ಪರ್ ಸ್ಪ್ರೇ ಅಪಾಯಕಾರಿ ಆಯುಧ: ಹೈಕೋರ್ಟ್
ಕೇಂದ್ರ ಸರ್ಕಾರ ಯಾವುದೇ ವೇತನ ಮಿತಿ ಇಲ್ಲದೆ ವಿದೇಶಿ ಕಾರ್ಮಿಕರನ್ನು ಇಪಿಎಫ್ ಮತ್ತು ಇಪಿ ವ್ಯಾಪ್ತಿಗೆ ಒಳಪಡಿಸಲು ಕಾಯ್ದೆಗೆ ತಿದ್ದುಪಡಿ ಮಾಡಿ 2008ರ ಅ.1ರಿಂದ ಜಾರಿಗೆ ಬರುವಂತೆ ಮಾಡಿದೆ. ಭಾರತದಿಂದ ಹೊರದೇಶಕ್ಕೆ ಸೇವೆಯ ಮೇಲೆ ನಿಯೋಜಿಸುವ ಉದ್ಯೋಗಿಗಳಿಗೆ ಅನುಕೂಲವಾಗು ಉದ್ದೇಶದಿಂದ ಕಾಯ್ದೆಗಳನ್ನು ರೂಪಿಸಲಾಗಿದೆ.
ಆ ದೇಶದಲ್ಲಿ ಅಭದ್ರತೆ ಉಂಟಾಗದಿರಲೆಂದು ಕಾಯ್ದೆ ರೂಪಿಸಲಾಗಿದೆ. ಆದರೆ, ಭಾರತೀಯ ಕಾರ್ಮಿಕರಿಗೆ ಪ್ರತಿ ತಿಂಗಳ 15 ಸಾವಿರ ವೇತನ ಮಿತಿಯಿದೆ. ಆದರೆ, ವಿದೇಶಿ ಕಾರ್ಮಿಕರಿಗೆ ಮಿತಿ ಹೇರದಿರುವುದು ಸರಿಯಲ್ಲ, ಇಪಿಎಫ್ ಮತ್ತು ಎಂಪಿ ಕಾಯ್ದೆಯನ್ನು ಕಡಿಮೆ ವೇತನ ಪಡೆಯುವವರಿಗೆ ನಿವೃತ್ತಿಯ ಬಳಿಕ ಅನುಕೂಲ ಕಲ್ಪಿಸಲು ರೂಪಿಸಲಾಗಿದೆಯೇ ವಿನಃ ತಿಂಗಳಿಗೆ ಲಕ್ಷಾಂತರ ರೂಪಾಯಿ ವೇತನ ಪಡೆಯುವವರಿಗೆ ಅಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಕೇಂದ್ರವು 2008ರಲ್ಲಿ ಅಂತಾರಾಷ್ಟ್ರೀಯ ಉದ್ಯೋಗಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೌಕರರ ಭವಿಷ್ಯ ನಿಧಿ (ಇಪಿಎಫ್) ಮತ್ತು ನೌಕರರ ಪಿಂಚಣಿ (ಇಪಿ) ಕಾಯ್ದೆಗೆ ತಿದ್ದುಪಡಿ ತಂದಿತ್ತು. ವಿದೇಶಿ ಕಾರ್ಮಿಕರಿಗೆ ವೇತನ ಮಿತಿ ಇಲ್ಲದೆ ಇಪಿ ಮತ್ತು ಇಪಿಎಫ್ ಸೌಲಭ್ಯ ಪಡೆ ಯಲು ಅವಕಾಶ ಮಾಡಿಕೊಟ್ಟಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರ ಸಂಸ್ಥೆಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ