ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!

Published : Dec 06, 2025, 03:15 PM IST
No Place in DK Shivakumar Cabinet KN Rajanna Declines Minister Post Offer

ಸಾರಾಂಶ

KN Rajanna on DK Shivakumar: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೆ, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ತಾನು ಸಚಿವನಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ತುಮಕೂರು (ಡಿ.6): ನಾನು 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ಎಂದು ಮಾಜಿ ಸಚಿವ ಕೆಎನ್‌ ರಾಣಣ್ಣ ಅವರು ಮಹತ್ವದ ನಿರ್ಧಾರವೊಂದನ್ನು ಘೋಷಿಸಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ತುಮಕೂರಿನಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ

ಡಿಕೆಶಿ ಸಿಎಂ ಆದ್ರೆ ನಾನು ಅವರ ಸಂಪುಟದಲ್ಲಿ ಮಂತ್ರಿ ಆಗೋಲ್ಲ:

ಸಚಿವ ಸ್ಥಾನದ ಬೇಡಿಕೆ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಿದ ರಾಜಣ್ಣ ಅವರು, ನಾನು ಮೊದಲೇ ಹೇಳಿದ್ದೇನೆ, ಶಿವಕುಮಾರ್ ಸಿಎಂ ಆದರೆ ಅವರ ಸಂಪುಟದಲ್ಲಿ ಸಚಿವ ಆಗುವುದಿಲ್ಲ. ಮತ್ತೆ ಅದನ್ನೇ ಹೇಳ್ತೀನಿ, ಡಿಕೆಶಿ ಸಂಪುಟದಲ್ಲಿ ನನಗೆ ಸ್ಥಾನ ಬೇಡವೇ ಬೇಡ. ನನಗೆ ಸಾಕು, ಇನ್ನೊಬ್ಬರಿಗೆ ಅವಕಾಶ ಕೊಡಲಿ ಎಂದು ಪುನರುಚ್ಚರಿಸಿದರು. ನಾನು ಯಾವತ್ತೂ ಅಧಿಕಾರ ಹುಡುಕಿ ಹೋದವನಲ್ಲ. ಅಧಿಕಾರ ಬೇಕು ಅಂತಾ ಸಂಪೂರ್ಣ ಅಪೇಕ್ಷೆ ಪಡೋನು ಅಲ್ಲ. ಅಧಿಕಾರ ಬಂದರೆ ಏನೆಲ್ಲಾ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದೇನೆ. ನಾನು ಸಚಿವನಾಗಿದ್ದಾಗ ಜಾರಿ ಮಾಡಿದ್ದ ತಿದ್ದುಪಡಿ (ಅಮೆಂಟ್‌ಮೆಂಟ್) ಜಾರಿಯಾದರೆ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಯಾಗುತ್ತದೆ. ಸೊಸೈಟಿಗಳಲ್ಲೂ ನಾನು ಮೀಸಲಾತಿ ವ್ಯವಸ್ಥೆ ಜಾರಿ ಮಾಡಿದ್ದೇನೆ ಎಂದು ತಾವು ತಂದ ಕ್ರಾಂತಿಕಾರಿ ಬದಲಾವಣೆಗಳನ್ನು ಸ್ಮರಿಸಿದರು.

ವಿರೋಧ ಪಕ್ಷಗಳಿಗೆ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನವಿರಲಿ

ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್‌ಗಳ ಕುರಿತು ವಿರೋಧ ಪಕ್ಷದ ಟೀಕೆಯ ಬಗ್ಗೆ ಮಾತನಾಡಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್ ಬಗ್ಗೆ ಊಟಕ್ಕೆ ಹೋದರೂ ಆರೋಪ ಮಾಡುತ್ತಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಅಂತಾ ಮನವಿ ಮಾಡುತ್ತೇನೆ ಎಂದು ಸಲಹೆ ನೀಡಿದರು.

ಇದೇ ವೇಳೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್‌ಗೆ ನೋಟಿಸ್ ಬಂದಿರುವ ಬಗ್ಗೆ ಕೇಳಿದಾಗ, ಆ ವಿಚಾರ ನನಗೂ ಗೊತ್ತಾಗಿದೆ. ಆದರೆ ಏನಕ್ಕೆ ಕೊಟ್ಟಿದ್ದಾರೆ ಅನ್ನೋ ಮಾಹಿತಿ ನನಗೂ ಇಲ್ಲ. ಅವರದ್ದು 128 ಕೇಸ್‌ಗಳು ಇದ್ದಾವೆ. ಅದರಲ್ಲಿ ಯಾವುದುಕ್ಕೆ ಕೊಟ್ಟಿದ್ದಾರೆ ಯಾರಿಗೆ ಗೊತ್ತು ಎಂದು ಪ್ರತಿಕ್ರಿಯಿಸಿದರು.

ಹಿಂಸಾಚಾರ ಒಪ್ಪುವಂತದಲ್ಲ: ಚಿಕ್ಕಮಗಳೂರು ಕೊಲೆಗೆ ಖಂಡನೆ

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯ ಕುರಿತು ಮಾತನಾಡಿದ ಅವರು, ಹಿಂಸೆ ಯಾವಾಗಲೂ ಕಠಿಣವಾದುದು. ಇಂತಹ ದಾಳಿಗಳು ಯಾವುದೇ ಪಕ್ಷದ ಮೇಲೆ ನಡೆಯಬಾರದು. ಇಂತಹ ಕೃತ್ಯಗಳು ಒಪ್ಪುವಂತದಲ್ಲ, ಎಂದು ಖಂಡಿಸಿದರು.

ಇಂಡಿಗೋ ಸ್ಥಗಿತಕ್ಕೆ ಮೋದಿ ಒಬ್ಬರನ್ನೇ ದೂಷಿಸಬೇಡಿ

ಇಂಡಿಗೋ ವಿಮಾನ ಹಾರಾಟ ಸ್ಥಗಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಇಂಡಿಗೋ ವಿಚಾರವಾಗಿ ಮೋದಿಯವರನ್ನು ಮಾತ್ರ ಬ್ಲೇಮ್ ಮಾಡಬಾರದು. ಬೇರೆ ಆಡಳಿತ ವರ್ಗದವರನ್ನು ಮಾಡಬೇಕು. 8 ಗಂಟೆ ಕೆಲಸದ ಬದಲು 12 ಗಂಟೆ ಕೆಲಸ ಮಾಡಿಸಿದ್ದಾರೆ. 200 ಜನ ಪೈಲೆಟ್ಸ್ ಕೊರತೆ ಇದೆ. ಹಾಗಾಗಿ ಸಮಸ್ಯೆ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !