
ಉಡುಪಿ(ಆ.13): ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ಹೂಗುಚ್ಛಗಳಿಗೆ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಸ್ಥಳಗಳಲ್ಲಿ ‘ಗಾರ್ಡ್ ಆಫ್ ಆನರ್’(ಗೌರವ ವಂದನೆ) ಸಲ್ಲಿಕೆ ನಿಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಮೂಲಕ ‘ಗಾರ್ಡ್ ಆಫ್ ಆನರ್’ನಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಕಿರಿಕಿರಿ ತಪ್ಪಿದಂತಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರವಾಸದಲ್ಲಿರುವ ಅವರು ಗುರುವಾರ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಆದರೆ ಮಂಗಳೂರಿನಲ್ಲಿ ಮುಖ್ಯಮಂತ್ರಿಗೆ ‘ಗಾರ್ಡ್ ಆಫ್ ಆನರ್’ ನೀಡಲು ಮೊದಲೇ ಸರ್ವ ಸಿದ್ಧತೆ ಮಾಡಿಕೊಂಡಿದ್ದರಿಂದ ಅದನ್ನು ಸ್ವೀಕಾರ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ, ರೈಲು- ಬಸ್ ನಿಲ್ದಾಣಗಳಲ್ಲಿ ‘ಗಾರ್ಡ್ ಆಫ್ ಆನರ್’ ನೀಡಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಬೆಂಗಳೂರಿಗೆ ವಾಪಸಾದ ಕೂಡಲೇ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಪೊಲೀಸ್ ಸಮಾರಂಭದಲ್ಲಿ ಗೌರವ ವಂದನೆ ಕೊಟ್ಟರೆ ಸಾಕು ಎಂದು ಹೇಳಿದರು.
ಕಟೌಟ್ ಬೇಡ:
ನಾನು ಮುಖ್ಯಮಂತ್ರಿಯಾದರೂ ಈ ನಾಡಿನ ಸೇವಕ. ಈ ಭಾವನೆ ಕಡಿಮೆಯಾಗಬಾರದು. ಹೀಗಾಗಿ ಯಾರೂ ನನ್ನ ಕಟೌಟ್ ಹಾಕಬಾರದು, ಶುಭ ಕೋರುವ ಹೋರ್ಡಿಂಗ್ ಹಾಕಬಾರದು ಎಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ