ಪ್ರಸ್ತುತ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಉಡುಪಿ (ಫೆ.17): ಪ್ರಸ್ತುತ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆ 23 ರಿಂದ ಆರಂಭವಾಗಲಿದ್ದು, ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ.
ಈ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. ಅಂತಿಮ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗುವಂತೆ, ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಶಾಸಕರು ಸಚಿವರಿಗೆ ಆಗ್ರಹಿಸಿದರು.
undefined
ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ: ಅಮರಶಿಲ್ಪಿ ಜಕಣಾಚಾರಿ ಕೈಚಳಕದ ಶಿಲ್ಪ ಕಲಾಕೃತಿಗಳು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಅವರು ರಜತಾದ್ರಿಯ ಜಿಪಂ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಶ್ವರಪ್ಪ ನಮ್ಮ ಸಾಮಾಜಿಕ ವ್ಯವಸ್ಥೆಗೇ ಧಕ್ಕೆ: ಸಚಿವ ದಿನೇಶ್ ಗುಂಡೂರಾವ್
ಈ ಸಂದರ್ಭ ಶಿಲಾಶಿಲ್ಪಿ ರಾಮಚಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಪ್ರೊ.ಬಿ. ಎ. ಆಚಾರ್ಯ, ಜಿಪಂ ಸಿಇಓ ಪ್ರಸನ್ನ ಎಚ್, ಉಪ ಕಾರ್ಯದರ್ಶಿ ರಾಜು ಮೊಗವೀರ, ವಿಶ್ವಕರ್ಮ ಸಮುದಾಯದ ಪ್ರಮುಖರಾದ ಮಧು ಆಚಾರ್ಯ ಮೂಲ್ಕಿ, ಕೆ. ವೆಂಕಟೇಶ್ ಆಚಾರ್ಯ, ರಮೇಶ್ ಆಚಾರ್ಯ ನೇರಂಬಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಮಹೇಶ್ ಮಲ್ಪೆ ನಿರೂಪಿಸಿದರು. ಹರೀಶ್ ವಂದಿಸಿದರು.