
ಬೆಂಗಳೂರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ. ಬದಲಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರವೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅದರ ಜೊತೆಗೆ ಈ ವರ್ಷದ ಮಟ್ಟಿಗೆ ಮುದ್ರಿತ ಅಂಕಪಟ್ಟಿಯನ್ನೂ ನೀಡಲಾಗುವುದು. ಆದರೆ, ಮುಂದಿನ ಸಾಲಿನಿಂದ ಸಂಪೂರ್ಣ ಡಿಜಿಟಲ್ ಅಂಕಪಟ್ಟಿಯನ್ನು ಮಾತ್ರ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದರು.
ಎಲ್ಲರಿಗೂ ಧನ್ಯವಾದ
ಐತಿಹಾಸಿಕ ಫಲಿತಾಂಶ ಬರಲು ಕಷ್ಟಪಟ್ಟು ವ್ಯಾಸಂಗ ಮಾಡಿದ ಎಲ್ಲಾ ವಿದ್ಯಾರ್ಥಿಗಳು, ಅವರಿಗೆ ಸಹಕಾರ ನೀಡಿದ ಶಿಕ್ಷಕರು, ಪೊಷಕರು ಹಾಗೂ ನಮ್ಮ ಮಂಡಳಿ ಅಧಿಕಾರಿಗಳು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ಫಲಿತಾಂಶ ಇನ್ನಷ್ಟು ಉತ್ತಮಗೊಳ್ಳುತ್ತಾ ಹೋಗುವ ಸಂಪೂರ್ಣ ವಿಶ್ವಾಸವಿದೆ. ಅದಕ್ಕಾಗಿ ನಮ್ಮ ಸರ್ಕಾರ ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ