
ಬೆಂಗಳೂರು, (ಆ.14): ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಳವಾಗಿದೆ.
ಅದರಂತೆ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಸಾರಿಗೆ ಸಚಿವ ಶ್ರೀರಾಮುಲು ಅವರೇ ಸ್ಪಷ್ಟಪಡಿಸಿದ್ದಾರೆ.
ರಿಕ್ಷಾ, ಬಸ್ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್
ಈ ಬಗ್ಗೆ ಇಂದು (ಆ.14) ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮುಲು,ಶೇಕಡಾ 70 ರಷ್ಟು ಜನರು ಬಸ್ ಮೇಲೆ ಅವಲಂಬಿಸಿದ್ದಾರೆ, ಹೀಗಾಗಿ, ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಮಾಡಲ್ಲ. ಹಳೇ ಬಸ್ ಸ್ಕ್ರಾಪ್ ನೀತಿಯನ್ನೇ ಪಾಲಿಸುತ್ತೀನಿ ಎಂದು ಸ್ಪಷ್ಟನೆ ನೀಡಿದರು.
ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆ ಈ ಸಾಲಿನಲ್ಲಿ 510.24 ಕೋಟಿ ರೂಪಾಯಿ ನಷ್ಟದಲ್ಲಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ಈ ಕಳೆದ ಬಿಎಸ್‌ವೈ ಸರ್ಕಾರದ ಅವಧಿಯಲ್ಲಿ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಕೈಹಾಕಿದ್ರು. ಆದ್ರೆ, ಸಿಎಂ ಬದಲಾವಣೆ ಆಗಿದ್ದರಿಂದ ಅದು ಸಾಧ್ಯವಾಗಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ