ರಾಜ್ಯಪಾಲರ ಪ್ರಾಸಿಕ್ಯೂಶನ್ ಖಂಡಿಸಿ ನಿರ್ಣಯ ತೆಗೆದುಕೊಂಡಿರುವ ಕರ್ನಾಟಕ ಸಚಿವ ಸಂಪುಟ ಇದೀಗ ಸುದ್ದಿಗೋಷ್ಠಿ ಮೂಲಕ ಮಹತ್ವದ ಘೋಷಣೆ ಮಾಡಿದೆ. ಈ ಕುರಿತು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ.
ಬೆಂಗಳೂರು(ಆ.17) ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೊರಡಿಸಿದ ಪ್ರಾಸಿಕ್ಯೂಶನ್ ನಿರ್ಣಯವನ್ನು ಕಾಂಗ್ರೆಸ್ ಖಂಡಿಸಿದೆ. ಬಿಜೆಪಿ, ಜೆಡಿಎಸ್ ರಾಜೀನಾಮೆಗೆ ಆಗ್ರಹ ತೀವ್ರಗೊಳಿಸುತ್ತಿದ್ದಂತೆ ಇತ್ತ ಸಚಿವ ಸಂಪುಟ ಸಭೆ ನಡೆಸಿದ ಕಾಂಗ್ರಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯಪಾಲರ ಖಂಡಿಸಿ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ. ಇದೇ ವೇಳೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಇಡೀ ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ನಮ್ಮ ಸಲಹೆಯನ್ನು ರಾಜ್ಯಪಾಲರು ಪರಿಗಣಿಸಿಲ್ಲ. ಹಿಂದಿನ ಸಂಪುಟ ಸಭೆಯಲ್ಲ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸಲ್ಲ ಎಂದು ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ನಿನಗೆ ತಾಕತ್ತು, ಧಮ್ಮು ಇದ್ದರೇ ಸಿಎಂರನ್ನ ಜೈಲಿಗೆ ಕಳುಹಿಸು ನೋಡೋಣ, ಬಿಜೆಪಿ ಶಾಸಕನಿಗೆ ಲಕ್ಷ್ಮಣ್ ಚಾಲೆಂಜ್
ರಾಜ್ಯಪಾಲರ ನಿರ್ಧಾರ ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಆಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ರಾಜ್ಯಾಪಾಲರ ಅಸಂವಿಧಾನಿಕ ನಡೆಯಿಂದ ತುರ್ತು ಸಂಪುಟ ಸಭೆ ಕರೆಯಬೇಕಾಗಿ ಬಂದಿತ್ತು. ಈ ವೇಳೆ ಎಲ್ಲಾ ಸಚಿವರು ಬೆಂಬಲಕ್ಕೆ ನಿಂತಿದ್ದಾರೆ. ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರಿಗೂ ಧನ್ಯವಾದ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಹವಣಿಸುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ರಾಜ್ಯಪಾಲರ ಕಾನೂನು ಬಾಹಿರ ನಿರ್ಧಾರವನ್ನು ಇಡೀ ಸಟಿವ ಸಂಪುಟ ಖಂಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರಕ ಕೈಗೊಂಬೆಯಾಗಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಇದನ್ನು ಸಂಪುಟ ಖಂಡಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಡವರ ಸರ್ಕಾರ. ನಮ್ಮ ಗ್ಯಾರೆಂಟಿಗಳಿಗೆ ಪ್ರಧಾನಿ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ತೇಜೋವಧೆಗೆ ಮಾಡಿರುವ ಪ್ರಯತ್ನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜನರ ಆಶೀರ್ವಾದ ನಮ್ಮ ಮೇಲಿದೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಕೊಟ್ಟಿರುವ ಪಿಟೀಷನ್‌ಗೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿಲ್ಲ. ಇಲ್ಲಿ ರಾಜಕೀಯ ದುರುದ್ದೇಶ ಸ್ಪಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ವಾಟಾಳ್ ನಾಗರಾಜ್ ಕೆಂಡ!