ಸಿದ್ದರಾಮಯ್ಯನವರ ಸರ್ಕಾರದಲ್ಲಿ ಗೌರವಸ್ಥ ಅಧಿಕಾರಿಗಳಿಗೆ ಉಳಿಗಾಲವಿಲ್ಲ : ವಿಜಯೇಂದ್ರ

Published : Jul 04, 2025, 08:23 AM IST
BJP Karnataka Chief Vijayendra Yediyurappa (Photo/ANI)

ಸಾರಾಂಶ

ಬೆಳಗಾವಿಯ ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಂದ ನಿಂದನೆ ಅನುಭವಿಸಿದ್ದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ಸೇವೆಯಿಂದ ನಿವೃತ್ತಿ ಬಯಸಿರುವುದು ಅತ್ಯಂತ ನೋವಿನ ಹಾಗೂ ದುರ್ದೈವದ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು : ಬೆಳಗಾವಿಯ ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಂದ ನಿಂದನೆ ಅನುಭವಿಸಿದ್ದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ಸೇವೆಯಿಂದ ನಿವೃತ್ತಿ ಬಯಸಿರುವುದು ಅತ್ಯಂತ ನೋವಿನ ಹಾಗೂ ದುರ್ದೈವದ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೆಚ್ಚುವರಿ ಎಎಸ್‌ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆ ಮೇಲೆ ಕೈಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ನೋವೋ ಎಂಬುದನ್ನು ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ ಎಂದು ಆರ್‌.ಅಶೋಕ್‌ ತಿಳಿಸಿದ್ದಾರೆ.

ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ. ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜೀನಾಮೆ ಕೊಟ್ಟು ಇರುವ ಅಲ್ಪಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ವಿಜಯೇಂದ್ರ ಅವರು, ಸಿದ್ದರಾಮಯ್ಯನವರ ಸರ್ಕಾರದಲ್ಲಿ ಗೌರವಸ್ಥ ಅಧಿಕಾರಿಗಳಿಗೆ ಉಳಿಗಾಲವಿಲ್ಲ.” ಗೌರವಸ್ಥ ಕ್ರಿಯಾಶೀಲ ಅಧಿಕಾರಿಗಳಿಗೆ ಕಪಾಳಮೋಕ್ಷ, ಸಾರ್ವಜನಿಕವಾಗಿ ಬಹಿರಂಗ ವೇದಿಕೆಯಲ್ಲೇ ಅಪಮಾನಿಸುವುದು, ಏಕವಚನದಲ್ಲಿ ಸಂಬೋಧಿಸುವುದು ಈ ಸರ್ಕಾರದಲ್ಲಿ ಸಾಮಾನ್ಯ ಎಂದು ಆರೋಪಿಸಿದ್ದಾರೆ.

ಬೆಳಗಾವಿಯ ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಂದ ನಿಂದನೆ ಅನುಭವಿಸಿದ್ದ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಇದೀಗ ತಮಗಾದ ಅವಮಾನದಿಂದ ಮನನೊಂದು ಗೌರವದಿಂದ ಕರ್ತವ್ಯ ನಿಭಾಯಿಸಿದರೂ ಕೆಟ್ಟ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವುದು ಸಾಧ್ಯವೇ ಇಲ್ಲ ಎಂಬ ನಿರ್ಧಾರಕ್ಕೆ ಬಂದು ನಿವೃತ್ತಿ ಬಯಸಿರುವುದು ಅತ್ಯಂತ ನೋವಿನ ಹಾಗೂ ದುರ್ದೈವದ ಸಂಗತಿ. ಇಂತಹ ಅಧಿಕಾರಿಗಳಿಗೆ ನೈತಿಕ ಬಲ ತುಂಬಲು ಈ ನಾಡಿನಲ್ಲಿ ಪ್ರಜ್ಞಾವಂತ ಜನರಿದ್ದಾರೆ, ಮಾಧ್ಯಮಗಳಿವೆ, ಭರಮನಿಯವರು ಯಾವುದೇ ಕಾರಣಕ್ಕೂ ಎದೆಗುಂದದೆ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ವಿನಂತಿಸುವೆ, ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!