ಮಾಂಸ ಪ್ರಿಯರ ಗಮನಕ್ಕೆ, ರಾಜ್ಯದಲ್ಲಿ ಸೆ. 6ರಂದು ಮಾಂಸ ಮಾರಾಟ ನಿಷೇಧ

By Gowthami K  |  First Published Sep 5, 2023, 3:17 PM IST

ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ಸೆ. 6ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಕಸಾಯಿಖಾನೆಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಮಾಡುವುದನ್ನು ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ


ಬೆಂಗಳೂರು (ಸೆ.5): ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ಸೆ. 6ರಂದು ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಯಾವುದೇ ರೀತಿಯ ಪ್ರಾಣಿ ವಧೆ ಮಾಡುವುದನ್ನು ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಯಾವತ್ತೂ ಕಸಾಯಿ ಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರಿಗೆ ಕೃಷ್ಣಾ ಜನ್ಮಾಷ್ಟಮಿ ಅಂಗವಾಗಿ ಸೆ. 6ರಂದು ಜಾನುವಾರುಗಳ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ಲೈಸೆನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tap to resize

Latest Videos

ಕೃಷ್ಣ ಜನ್ಮಾಷ್ಟಮಿ 2023 ಶುಭ ಮುಹೂರ್ತ,ಮಹತ್ವ

ಚಾಮರಾಜನಗರ: ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಬುಧವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಅಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತವರ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shri Krishna: ಜನ್ಮಾಷ್ಟಮಿಯಂದು ಈ 8 ವಸ್ತುಗಳನ್ನು ಮನೆಗೆ ತನ್ನಿ, ಸಮೃದ್ಧಿ ಹೆಚ್ಚಾಗುತ್ತದೆ

ಹುಬ್ಬಳ್ಳಿ: ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಸೆ. 6 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಎಲ್ಲ ವಧಾಲಯಗಳಲ್ಲಿ ಪ್ರಾಣಿ ವಧೆ ಹಾಗೂ ಮಾಂಸದ ಅಂಗಡಿಗಳಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಪಾಲಿಕೆಯ ವಿರುದ್ಧವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ವ್ಯಾಪರಸ್ಥರ ಲೈಸನ್ಸನ್ನು ರದ್ದುಪಡಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!