
ಬೆಂಗಳೂರು (ಮೇ.09) ನಮ್ಮ ಮೆಟ್ರೋ ಹೊರಡಿಸಿದ ಆದೇಶ ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು. ಮೇ 10 ರಂದು 2 ಗಂಟೆಗಳ ಕಾಲ ಹೊಸಹಳ್ಳಿ-ಕಬ್ಬನ್ ಪಾರ್ಕ್ ನಿಲ್ದಾಣದ ಮೆಟ್ರೋ ಸಂಚಾರ ಸ್ಥಗಿತಗೊಳಿಸುವ ಕುರಿತು ಆದೇಶ ಹೊರಡಿಸಿತ್ತು. ಇದೀಗ ಈ ಆದೇಶ ರದ್ದುಗೊಳಿಸಿದೆ. ನಾಳೆ ಮೆಟ್ರೋ ಸಂಚಾರ ಯಥಾಸ್ಥಿತಿಯಂತೆ ಇರಲಿದೆ ಎಂದಿದೆ.
ನಾಳೆ (ಮೇ.09) ಹೊಸಹಳ್ಳಿ- ಕಬ್ಬನ್ ಪಾರ್ಕ್ ನಿಲ್ದಾಣದ ನಡುವೆ ಮೆಟ್ರೋ ಸ್ಥಗಿತ ಇಲ್ಲ. ಎಂದಿನಂತೆ ಸಂಚಾರ ನಡೆಸಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಯಥಾಸ್ಥಿತಿ ಮೆಟ್ರೋ ಸಂಚಾರ ನಡೆಯಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.
ನಿರ್ವಹಣಾ ಕಾಮಾಗಾರಿ ಹಿನ್ನಲೆಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೆಟ್ರೋ ನಿಲ್ದಾಣ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ವರೆಗೆ ಸಂಚಾರ ಸ್ಥಗಿತಗೊಳಿಸಲು ಮೊದಲು ನಿರ್ಧರಿಸಲಾಗಿತ್ತು. ಬೆಳಗ್ಗೆ 7 ಗಂಟೆಯಿಂದ 9 ಗಂಟೆ ವರೆಗೆ ಸಂಚಾರ ಸ್ಥಗಿತಗೊಳಿಸಿ ನಿರ್ವಹಣೆ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಕೈಬಿಡಲಾಗಿದೆ. ಇದೀಗ ಯಥಾಸ್ಥಿತಿ ಕಾಪಾಡಿಕೊಳ್ಳಲು ಬಿಎಂಆರ್‌ಸಿಎಲ್ ಮುಂದಾಗಿದೆ.
ನಮ್ಮ ಮೆಟ್ರೋ ಪಿಂಕ್ ಲೈನ್ ಸೇವೆ ಜೂನ್ ತಿಂಗಳಿನಿಂದ ಆರಂಭಗೊಳ್ಳಲಿದೆ. ಕಾಳೇನ ಅಗ್ರಹಾರ ದಿಂದ ನಾಗವಾರ ಮಾರ್ಗದ ಮೂಲಕ ಸಾಗಲಿರುವ ಈ ಮೆಟ್ರೋದ ಚೆಕ್ಕಿಂಗ್ ಮುಂದಿನ 15 ದಿನಗಳ ಕಾಲ ನಡೆಯಲಿದೆ. ಕೇಂದ್ರ ರೈಲ್ವೆ ಇಲಾಖೆಯ ಆರ್ಡಿಎಸ್ಓ ತಪಾಸಣೆ ಆರಂಭವಾಗಿದೆ. ರೈಲಿನ ಸ್ಪೀಡ್ ಟೆಸ್ಟ್, ರೈಲಿನ ಲೋಡ್ ಟೆಸ್ಟ್, ಖಾಲಿ ರೈಲಿನ ತಪಾಸಣೆ, ಟ್ರ್ಯಾಕ್ ಟೆಸ್ಟ್, ಸ್ಟೇಷನ್ ಗಳ ತಪಾಸಣೆ, ಪವರ್ ಚೆಕ್ಕಿಂಗ್, ಹೀಗೆ ಹಲವು ರೀತಿಯ ತಪಾಸಣೆ ನಡೆಯಲಿದೆ.,
ಈಗಾಗಲೇ ಪಿಂಕ್ ಲೈನ್ ಗೆ 5 ರೈಲುಗಳು ಆಗಮಿಸಿದ್ದು, ಮೇ ಮೊದಲ ವಾರದಲ್ಲಿ ಆರನೇ ರೈಲು ಆಗಮಿಸಲಿದೆ. ಮೊದಲ ಹಂತದಲ್ಲಿ ಪಿಂಕ್ ಲೈನ್ ಗೆ 6 ಡ್ರೈವರ್ಲೆಸ್ ರೈಲುಗಳು ಬರಲಿದೆ. ಕಾಳೇನ ಅಗ್ರಹಾರ ಟು ನಾಗವಾರಕ್ಕೆ ಸಂಪರ್ಕ ಕಲ್ಪಿಸಲಿರುವ ಪಿಂಕ್ ಲೈನ್ 21.25 ಕಿಮೀ ವಿಸ್ತೀರ್ಣ, 18 ಮೆಟ್ರೋ ನಿಲ್ದಾಣಗಳಿವೆ. ಇದರಲ್ಲಿ 12 ಅಂಡರ್ ಗ್ರೌಂಡ್, 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ ಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ