ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಹೇಳಿಕೆ ಯಾರೂ ನೀಡಬಾರದು: ಆರಗ ಜ್ಞಾನೇಂದ್ರ

By Suvarna News  |  First Published Mar 21, 2022, 1:20 PM IST

ಅಡಿಕೆ ದೇಹಕ್ಕೆ ಹಾನಿಕಾರಕ ಎಂಬ ವಿಚಾರ ಕೋರ್ಟ್ ನಲ್ಲಿ ಬಗೆ ಹರಿಯುವವರೆಗೂ ಯಾರೂ ಸಹ ಈ ಬಗ್ಗೆ  ಮನಬಂದಂತೆ ಹೇಳಿಕೆ ನೀಡಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.


ವಿಕ್ರಮ್ ಕುಮಾರ್, ಏಷ್ಯಾ ನೆಟ್ ಸುವರ್ಣ ನ್ಯೂಸ್, ಬೆಂಗಳೂರು 

ಬೆಂಗಳೂರು(ಮಾ.21): ಅಡಿಕೆ (Areca nut) ದೇಹಕ್ಕೆ ಹಾನಿಕಾರಕ ಎಂಬ ವಿಚಾರ ಕೋರ್ಟ್ ನಲ್ಲಿ ಬಗೆ ಹರಿಯುವವರೆಗೂ ಯಾರೂ ಸಹ ಈ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ನ ಅಧ್ಯಕ್ಷರೂ ಆಗಿರುವ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು.

Tap to resize

Latest Videos

ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಲೋಕಸಭಾ ಸದಸ್ಯರೊಬ್ಬರು ಅಡಿಕೆ ಹಾನಿಕಾರಕ ಹಾಗೂ ಅದನ್ನ ಬ್ಯಾನ್ ಮಾಡಬೇಕು ಎಂದು ನೀಡಿದ್ದ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈ ಕಾರಣದಿಂದಾಗಿ, ಅಡಿಕೆ ದೇಹಕ್ಕೆ ಹಾನಿಕಾರಕ ಅಲ್ಲಾ, ಹಾಗೂ ಈ ರೀತಿ ಹೇಳಿಕೆಯಿಂದಾಗಿ ಅಡಿಕೆ ಮಾರುಕಟ್ಟೆ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ರಾಜ್ಯದ ಅಡಿಕೆ ಟಾಸ್ಕ್ ಫೋರ್ಸ್ (Karnataka State Areca Task Force)  ನಿಯೋಗದ ವತಿಯಿಂದ ದೆಹಲಿಗೆ ತೆರಳಿ ಮನವಿ ಮಾಡಲಾಗಿದೆ.

ಕೃಷಿ ಸಚಿವ ಥೋಮರ್ ಹಾಗೂ ರಾಜ್ಯ ಸಚಿವರನ್ನ ಭೇಟಿ ಮಾಡಲಾಗಿದ್ದು, ಅಡಿಕೆ ಬಗ್ಗೆ ಕೋರ್ಟ್ ನಲ್ಲಿ ತೀರ್ಮಾನ ಆಗದೆ ಹೇಳಿಕೆಗಳನ್ನ ನೀಡಿದ್ರೆ ಅದು ಅಡಿಕೆ ಬೆಳೆಗಾರರ ಬದುಕಿನ ಮೇಲೆ ಪರಿಣಾಮ ಬೀರಲಿದೆ ಎಂದು ಮನವರಿಕೆ ಮಾಡಿದ್ದೇವೆ ಎಂದರು.

Srirangapatna Tourism: ವಿದೇಶಿ ಮಾದರಿ ಶ್ರೀರಂಗಪಟ್ಟಣ ಅಭಿವೃದ್ಧಿಗೆ ಚಿಂತನೆ 

ಇನ್ನು, ಅಡಿಕೆ ಮನುಷ್ಯನ ದೇಹಕ್ಕೆ ಹಾನಿಕರಕ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಗೆ ಒಂದು ಅಫಿಡವಿಟ್ ನೀಡಿದ್ದು, ಈ ಅಫಿಡವಿತ್ ಅನ್ನು ತೆಗೆಯುವ ಸಲುವಾಗಿ ನಾವು ಪ್ರಯತ್ನ ಮಾಡ್ತಿದ್ದೇವೆ ಹಾಗೂ ಅಡಿಕೆ ಹಾನಿಕರಕ ಅಲ್ಲಾ ಎಂಬ ಬಗ್ಗೆ ನಮ್ಮ ರಾಜ್ಯದಲ್ಲಿ ಸಂಶೋಧನೆಯನ್ನ ಸಹ ಮಾಡಲಾಗುತ್ತಿದೆ.

NCEE SURVEY: ಲಾಕ್‌ಡೌನ್‌ ನಂತರ ಮೂಲಭೂತ ಕೌಶಲ್ಯ ಕಳೆದುಕೊಂಡ ಮಕ್ಕಳು! 

ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ (ramaiah institute of medical sciences) ನಮ್ಮ ಟಾಸ್ಕ್ ಫೋರ್ಸ್ ಕಡೆಯಿಂದ ಸಂಶೋಧನೆ ನಡೆಯುತ್ತಲಿದೆ, ಅಲ್ಲದೆ ಕೇಂದ್ರದಿಂದಲೂ ಸಹ ಈ ಬಗ್ಗೆ ಅಧ್ಯಯನ ನಡೆಸಲು ಒಂದು ಸಮಿತಿಯನ್ನ ರಚನೆ ಮಾಡಲಾಗ್ತಿದೆ. ಈ ಸಮಿತಿ ರಚಣೆಯಿಂದಾಗಿ ಅಡಿಕೆ ಬೆಳೆಗಾರರಿಗೆ ವಿಶೇಷವಾದ ಶಕ್ತಿ ಬರಲಿದೆ. ಅಡಿಕೆ ಬೆಳೆ ಹಾನಿಕಾರಕ ಅಲ್ಲಾ ಎಂಬುದಕ್ಕೆ ಒಂದು ಪುಷ್ಟಿ ದೊರೆಯಲಿದೆ ಹಾಗೂ ಇದರಿಂದ ಬಹಳ ದೊಡ್ಡ ಯಶಸ್ಸು ನಮಗೆ ದೊರೆಯಲಿದೆ ಎಂದರು.

ಇನ್ನು ನಾವು ನೀಡಿರುವ ಈ ಮನವಿಗೆ  ಕೇಂದ್ರ ಸರ್ಕಾರ ಕೂಡ ಒಪ್ಪಿಗೆ ನೀಡಿರುವುದು ನಮಗೆ ಅತ್ಯಂತ ಸಂತೋಷ ವಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
 

click me!