ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವಿಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಜಾರಿ ಮಾಡಲಾಗಿದ್ದ ಜಾಮೀನು ರಹಿತ ವಾರೆಂಟ್ ಅನ್ನು ಹೈಕೋರ್ಟ್ ಹಿಂಪಡೆದಿದೆ.
ಬೆಂಗಳೂರು (ಅ.17): ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವಿಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಜಾರಿ ಮಾಡಲಾಗಿದ್ದ ಜಾಮೀನು ರಹಿತ ವಾರೆಂಟ್ ಅನ್ನು ಹೈಕೋರ್ಟ್ ಹಿಂಪಡೆದಿದೆ. ಪ್ರಕರಣ ಸಂಬಂಧ ದಾಖಲಾಗಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಕೆ ರಾಜೇಶ್ ರೈ ಅವರ ಚೇತನ್ ಪರ ವಕೀಲರು ನ್ಯಾಯಾಲಯ ಈ ಹಿಂದೆ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿ ಕುರಿತು ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಚೇತನ್ ಅಹಿಂಸಾ ವಿರುದ್ಧ ಈ ಹಿಂದೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು.
ಅರ್ಜಿ ಇತ್ತೀಚೆಗೆ ಮತ್ತೆ ವಿಚಾರಣೆಗೆ ಬಂದಾಗ ನಟ ಚೇತನ್ ಹಾಗೂ ಅವರ ಪರ ವಕೀಲ ಜೆ.ಡಿ. ಕಾಶಿನಾಥ್ ಖುದ್ದು ಹಾಜರಾಗಿದ್ದರು. ಹೊರಡಿಸಿರುವ ಜಾಮೀನು ರಹಿತ ವಾರೆಂಟ್ ಹಿಂಪಡೆಯಬೇಕು ಎಂದು ಕೋರಿದರು. ಆ ಮನವಿ ಪುರಸ್ಕರಿಸಿದ ನ್ಯಾಯಪೀಠವು ಚೇತನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹಿಂಪಡೆದು, ಐದು ಸಾವಿರ ರು. ದಂಡ ವಿಧಿಸಿತು. ದಂಡ ಮೊತ್ತವನ್ನು ಹೈಕೋರ್ಟ್ ಕಟ್ಟಡದಲ್ಲಿರುವ ವಕೀಲರ ಗ್ರಂಥಾಲಯ ಘಟಕಕ್ಕೆ ಪಾವತಿಸಬೇಕು ಎಂದು ಚೇತನ್‌ಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಸಂಸದ ಒಡೆಯರ್‌ಗೆ ಟಾಂಗ್: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪರವಾದ ಏಕೈಕ ಪಕ್ಷ ಬಿಜೆಪಿ ಎಂದ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಅವರಿಗೆ ನಟ ಚೇತನ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಂಸದರು, ಭಾರತ ಅಭಿವೃದ್ಧಿ ಹೊಂದವುದು ಬಿಜೆಪಿಯಿಂದ ಮಾತ್ರ ಸಾಧ್ಯ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಿಜೆಪಿ ಸೇರ್ಪಡೆಯಾಗಬೇಕು. ಇಂದು ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ ಅಂದ್ರೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಕಾರಣ.
52 ಕೋಟಿ ಆಸ್ತಿ ಘೋಷಿಸಿದ್ದರೂ ಸ್ವಂತ ಮನೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ನಟ ಚೇತನ್!
ಭಾರತವನ್ನು ಆರ್ಥಿಕವಾಗಿ ದೊಡ್ಡ ದೇಶವನ್ನಾಗಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದು, ಅದಕ್ಕಾಗಿ ಬಿಜೆಪಿಗೆ ನಿಮ್ಮೆಲ್ಲರ ಬೆಂಬಲ ಬೇಕೆಂದು ಯದುವೀರ್ ಒಡೆಯರ್ ಮನವಿ ಮಾಡಿಕೊಂಡರು. ಬಿಜೆಪಿಯಲ್ಲಿ ಕುಟುಂಬ ರಾಜಕೀಯಕ್ಕಿಂತ ದೇಶ ಮೊದಲು ಎಂಬವುದು ಪಕ್ಷದ ಧ್ಯೇಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪರವಾದ ಏಕೈಕ ಪಕ್ಷ ಬಿಜೆಪಿ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುಲ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಸಿದ್ಧಾಂತಗಳನ್ನು ತಿಳಿಸಿ ಜನರನ್ನು ನೋಂದಣಿ ಮಾಡಿಕೊಳ್ಳಬೇಕು ಎಂದು ಯದುವೀರ್ ಒಡೆಯರ್ ಕರೆ ನೀಡಿದರು.