ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ

By Sathish Kumar KHFirst Published Feb 10, 2024, 7:56 PM IST
Highlights

ಬೆಂಗಳೂರು ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಬೆಂಗಳೂರು (ಫೆ.10): ಬೆಂಗಳೂರು ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆರೋಗ್ಯಾಧಿಕಾರಿಂದ ಹಾಗೂ ಪೊಲೀಸ್ ಅಧಿಕಾರಿಗಳಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಇನ್ನು ಈ ಬಗ್ಗೆ ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದರು. ಈ ಪ್ರಕರಣವನ್ನು ವಿಚಾರಣೆ ಮಾಡಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಕೆ.ಎಸ್.ಈಶ್ವರಪ್ಪ ನೀವು ಕೊಲ್ಲಲು ಸಿದ್ಧರಿದ್ದೀರಾ? ನಾನು ನಿಮ್ಮ ಮನೆಗೆ ಬರ್ತೇನೆ: ಸವಾಲೆಸೆದ ಸಂಸದ ಡಿ.ಕೆ. ಸುರೇಶ್!

ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದಿದ್ದ ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗಿತ್ತು. ಕೋವಿಡ್ ನಿಯಮಗಳಾದ ಸಾಮಾಜಿಕ ಅಂತರ ಪಾಲನೆ, ಕಡ್ಡಾಯ ಮಾಸ್ಕ್ ಧರಿಸುವಿಕೆ ಹಾಗೂ ಜನಸಂದಣಿ ಆಗುವಂತೆ ಸಭೆ-ಸಮಾರಂಭ ಮಾಡದಂತೆ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಜನರು ಒಂದೆಡೆ ಸೇರಿ ಸಾಮಾಜಿಕ ಅಂತರ ಪಾಲಿಸದೇ ಮೇಕೆದಾಟು ಪಾದಯಾತ್ರೆ ಮಾಡಲಾಗಿತ್ತು. ಆದ್ದರಿಂದ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿತ್ತು.

ಇನ್ನು ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಕೋರ್ಟ್ ಸಮನ್ಸ್‌ಗೂ ಬೆಲೆ ಕೊಡದೇ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ನರೇಂದ್ರ ಮೋದಿ ಅಧಿಕಾರದಲ್ಲಿ ಒಂದಾದ್ರೂ ಡ್ಯಾಮ್ ಕಟ್ಟಿದ್ರೆ ಹೇಳಲಿ, ಅವರ ಗುಲಾಮನಾಗ್ತೀನಿ: ಶಾಸಕ ನರೇಂದ್ರಸ್ವಾಮಿ

click me!