
ಬೆಂಗಳೂರು (ನ.29): ಚುನಾವಣೆ ದಿನಗಳು ಸನಿಹವಾಗುತ್ತಿರುವ ನಡುವೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆಗಳು ನಡೆದಿವೆ. ಸೋಮವಾರ 108 ಇನ್ಸ್‌ಪೆಕ್ಟರ್‌ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿತ್ತು. ಮಂಗಳವಾರ ಮತ್ತೆ 30 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಲಾಗಿದೆ. ಅದರೊಂದಿಗೆ ಇಬ್ಬರು ಸಿವಿಲ್ ನಾನ್ ಐಪಿಎಎಸ್ ಅಧಿಕಾರಿಗಳನ್ನೂ ಕೂಡ ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಚೇರಿ ವರ್ಗಾವಣೆ ಮಾಡಿದೆ. ಸೇವಾ ಸ್ಥಳದ ನಿರೀಕ್ಷೆಯಲ್ಲಿದ್ದ ಎಸ್.ರಮೇಶ್ ಕುಮಾರ್ ಅವರನ್ನು ರಾಜ್ಯ ಗುಪ್ತವಾರ್ತೆ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗಿದೆ. ಈವರೆಗೂ ಗುಪ್ತವಾರ್ತೆ ವಿಭಾಗದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಿಟಿ ಜಯಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಸ್ತುತ ಕಾರ್ಯ ನಿರ್ವಹಣೆ ಮಾಡುತ್ತಿರುವ ಹುದ್ದೆಯಿಂದ ಕೂಡಲೇ ಬಿಡುಗಡೆ ಮಾಡಿ, ಸೂಚಿಸಿರುವ ಸ್ಥಳಕ್ಕೆ ಕೂಡಲೇ ವರ್ಗಾವಣೆ ಆಗುವಂತೆ ಸರ್ಕಾರ ಸೂಚಿಸಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ, ನಿನ್ನೆ 108 ಇಂದು 30 ಮಂದಿ ವರ್ಗಾವಣೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ