ದಕ್ಷಿಣ ರೀತಿ ಒಗ್ಗಟ್ಟಿಗೆ ಉತ್ತರ ಕರ್ನಾಟಕ ಶಾಸಕರ ಕೂಗು: ಪಕ್ಷಾತೀತ ಹೋರಾಟ ಅಗತ್ಯ

Published : Dec 18, 2024, 06:00 AM IST
ದಕ್ಷಿಣ ರೀತಿ ಒಗ್ಗಟ್ಟಿಗೆ ಉತ್ತರ ಕರ್ನಾಟಕ ಶಾಸಕರ ಕೂಗು: ಪಕ್ಷಾತೀತ ಹೋರಾಟ ಅಗತ್ಯ

ಸಾರಾಂಶ

ಸಮಗ್ರ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಎಂಬ ತಾರತಮ್ಯ ಧೋರಣೆ ಅನುಸರಿಸುತ್ತಿವೆ. ಸಮಾಜದ ಏಳ್ಳೆಗೆ ಸಮಸಮಾಜ ರೂಪಿಸಬೇಕಾದ ಅಗತ್ಯತೆ ಇರುವಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಮ ಪ್ರಾಂತ್ಯ ಬೇಕಾಗಿದೆ ಎಂದು ಆಗ್ರಹಿಸಿದರು. 

ಸುವರ್ಣ ವಿಧಾನಸಭೆ(ಡಿ.18):  ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಯಾಗಬೇಕಾದರೆ ದಕ್ಷಿಣ ಕರ್ನಾಟಕದ ಸದಸ್ಯರ ಮಾದರಿಯಲ್ಲಿ ಉತ್ತರ ಕರ್ನಾಟಕದ ಎಲ್ಲಾ ಸದಸ್ಯರು ಜಾತ್ಯತೀತ ಮತ್ತು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾದ ಅಗತ್ಯತೆ ಇದೆ ಮತ್ತು ಸಮ ಸಮಾಜದಂತೆ ಸಮ ಪ್ರಾಂತ್ಯ ನಿರ್ಮಾಣದ ಅನಿವಾರ್ಯತೆ ಇದೆ ಎಂಬ ಪ್ರತಿಪಾದನೆ ವ್ಯಕ್ತವಾಗಿದೆ. 

ಮಂಗಳವಾರ ಉತ್ತರ ಕರ್ನಾಟಕ ಅಭಿವೃದ್ಧಿ ಮತ್ತು ಸಮಸ್ಯೆ ಗಳ ಮೇಲಿನ ಚರ್ಚೆಯಲ್ಲಿ ಆ ಭಾಗದ ಸದಸ್ಯರು ಪಕ್ಷಾತೀತವಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಅಗತ್ಯ ಇದೆ ಎಂದು ನುಡಿದರು. 
ಸಮಗ್ರ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಎಂಬ ತಾರತಮ್ಯ ಧೋರಣೆ ಅನುಸರಿಸುತ್ತಿವೆ. ಸಮಾಜದ ಏಳ್ಳೆಗೆ ಸಮಸಮಾಜ ರೂಪಿಸಬೇಕಾದ ಅಗತ್ಯತೆ ಇರುವಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಮ ಪ್ರಾಂತ್ಯ ಬೇಕಾಗಿದೆ ಎಂದು ಆಗ್ರಹಿಸಿದರು. 

ಕಾವೇರಿಗೆ ಸಿಗೋ ಪ್ರಾಮುಖ್ಯತೆ ಉತ್ತರ ಕರ್ನಾಟಕದ ನೀರಾವರಿಗಿಲ್ಲ: ಪಕ್ಷಭೇದ ಮರೆತು ಚರ್ಚೆಯಲ್ಲಿ ಪಾಲ್ಗೊಂಡ ಉ.ಕ ಶಾಸಕರು

ಕಾಂಗ್ರೆಸ್ ಸದಸ್ಯ ಪ್ರಕಾಶ್ ಕೋಳಿವಾಡ ಮಾತನಾಡಿ, ದಕ್ಷಿಣ ಕರ್ನಾಟಕವು ಉತ್ತರ ಕರ್ನಾಟಕಕ್ಕಿಂತ ಸಾಕಷ್ಟು ಅಭಿವೃದ್ಧಿಯಾಗಿದೆ. ಅಲ್ಲಿನ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಒಗ್ಗಟ್ಟು ಪ್ರದರ್ಶಿಸಿ ತಮಗೆ ಬೇಕಾದ ಅನುದಾನವನ್ನು ಪಡೆದುಕೊಳ್ಳುತ್ತಾರೆ. ಅದೇ ರೀತಿಯಲ್ಲಿ ಉತ್ತರ ಕರ್ನಾಟಕ ಶಾಸಕರು ಪಕ್ಷಾತೀತವಾಗಿ, ಜಾತ್ಯತೀತವಾಗಿ ಒಗ್ಗಟ್ಟಿನೊಂದಿಗೆ ಹೋರಾಟ ನಡೆಸಬೇಕು. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೋಲಿಕೆ ಮಾಡಿದರೆ ಕೈಗಾರಿಕೆ ಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಎಲ್ಲವೂ ದಕ್ಷಿಣ ಕರ್ನಾಟಕದಲ್ಲಿಯೇ ಇವೆ. ಜಿಡಿಪಿ ದರದಲ್ಲಿ ಮೊದಲ 10 ಜಿಲ್ಲೆಗಳು ದಕ್ಷಿಣ ಕರ್ನಾಟಕದಲ್ಲಿವೆ. ಬೆಂಗಳೂರಲ್ಲಿ ಸುಮಾರು 70 ಸಾವಿರ ಕಂಪನಿಗಳಿದ್ದರೆ ಉತ್ತರ ಕರ್ನಾಟಕದಲ್ಲಿ ಕೇವಲ ಏಳು ಕೈಗಾರಿಕೆಗಳಿವೆ ಎಂದು ಬೇಸರ ವ್ಯಕ್ತಪಡಿಸಿದರು. 

ಬಿಜೆಪಿ ಸದಸ್ಯೆ ಶಶಿಕಲಾ ಜೊಲ್ಲೆ ಮಾತನಾಡಿ, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಮಲತಾಯಿ ಧೋರಣೆ ತೋರುತ್ತಿದೆ. ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು 100 ವರ್ಷ ಪೂರ್ಣ ಗೊಂಡ ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ಸಂಗತಿ. ಅದೇ ರೀತಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಚಿಕ್ಕೋಡಿ ನ್ಯಾಯಾಲಯದಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾದಿಸಿ, ನಿಪ್ಪಾಣಿಯಲ್ಲಿ ಡಾ. ವರಾಳೆ ಎಂಬುವವರ ಮನೆಯಲ್ಲಿ ವಾಸ್ತವ್ಯ ಹೂಡಿದ ಘಟನೆಗೂ 100 ವರ್ಷ ಪೂರ್ಣಗೊಂಡಿದ್ದು, ಆ ಕುರಿತು ಕಾರಕ್ರಮ ಆಯೋಜಿಸಬೇಕು ಎಂದರು. 

ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ ಒಂದೇ ಹಂತದಲ್ಲಿ ಭೂ ಸ್ವಾಧೀನ: ಸಿದ್ದರಾಮಯ್ಯ

ಕಾಂಗ್ರೆಸ್ ಸದಸ್ಯ ಬಿ.ಆರ್.ಪಾಟೀಲ್ ಮಾತನಾಡಿ, ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಶೇ.40 ರಷ್ಟು ಹುದ್ದೆ ಗಳು ಖಾಲಿ ಇವೆ. ಶಿಕ್ಷಕರ ಹುದ್ದೆಗಳು ಸಹ ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಿದರೆ ಅಭಿವೃದ್ಧಿಗೆ ಸಹ ಕಾರಿಯಾಗಲಿದೆ. ಸರ್ಕಾರವು ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ. ಆದರೆ, ಅವರಿಗೆ ಉತ್ತರದಾಯಿತ್ವ ಇರುವುದಿಲ್ಲ. ಹೀಗಾಗಿ ಕಾಯಂ ಶಿಕ್ಷಕರನ್ನು ನೇಮಕ ಮಾಡಬೇಕಾಗಿದ್ದು, ಅವರಿಗೆ ಜವಾಬ್ದಾರಿ ಇರುತ್ತದೆ ಎಂದು ಹೇಳಿದರು. 
ಕಾಂಗ್ರೆಸ್‌ನ ರಾಜು ಕಾಗೆ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಸಹಕಾರಿ ಸಕ್ಕರೆ ಕಾರ್ಖಾನೆಗಳು ನಷ್ಟದಲ್ಲಿವೆ. ಆದರೆ, ಖಾಸಗಿ ಸಕ್ಕರೆ ಕಾರ್ಖಾನೆಗಳು ತೂಕದಲ್ಲಿ ಮೋಸ ಸೇರಿದಂತೆ ಮತ್ತಿತರ ಕಾರಣ ದಿಂದಾಗಿ ಲಾಭದಲ್ಲಿವೆ. ಸಹಕಾರಿ ಸಕ್ಕರೆ ಕಾರ್ಖಾ ನೆಗಳನ್ನು ನಷ್ಟದಿಂದ ಮೇಲೆತ್ತಲು, ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ 100 ಕೋಟಿ ಸಹಾಯ ಧನ ನೀಡಲು ಕ್ರಮ ಕೈಗೊಳ್ಳಬೇಕು ಎಂದರು. 

ಭೀಮಣ್ಣ ನಾಯಕ್ ಮತ್ತು ಕರೆಮ್ಮ ನಾಯಕ್ ಅವರು ಉತ್ತರ ಕರ್ನಾಟಕ ಭಾಗದ ಕ್ಷೇತ್ರದಲ್ಲಿ ಹಲವು ಪ್ರವಾಸಿ ತಾಣಗಳಿವೆ. ಹೀಗಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಗ್ರಹಿಸಿದರು. ಇನ್ನು, ಮಹೇಶ್ ಟೆಂಗಿನಕಾಯಿ, ಹುಬ್ಬಳ್ಳಿಯನ್ನು ಪ್ರವಾಸೋದ್ಯಮದ ಹಬ್ ಮಾಡಬೇಕು ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್