ಮತ್ತೆ ಜೋರಾದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು! ಉತ್ತರ ಕರ್ನಾಟಕದ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಆರೋಪ! ಉತ್ತರ ಕರ್ನಾಟಕದ ಬೇಡಿಕೆ ಈಡೇರಿಸಲು ಸಿಎಂಗೆ ಕುಮಾರಸ್ವಾಮಿಗೆ ಗಡುವು! ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸೋಮಶೇಖರ ಕೋತಂಬರಿ! ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಆಯೋಗ ರಚನೆಗೆ ಒತ್ತಾಯ
ಹಾವೇರಿ(ಡಿ.02): ಉತ್ತರ ಕರ್ನಾಟಕದ ಕುರಿತು ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮತ್ತೆ ಅಪಸ್ವರ ಕೇಳಿ ಬಂದಿದೆ. ಸಿಎಂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಭರವಸೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಆಗ್ರಹಿಸಿದೆ.
ಈ ಕುರಿತು ಮಾತನಾಡಿರುವ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸೋಮಶೇಖರ ಕೋತಂಬರಿ, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಆಯೋಗ ರಚನೆ ಕುರಿತು ಸಿಎಂ ಶೀಘ್ರ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
undefined
ಬೆಳಗಾವಿ ಸುವರ್ಣ ಸೌಧಕ್ಕೆ ಕಚೇರಿಗಳ ವರ್ಗಾವಣೆ ಮಾಡುವುದರಲ್ಲಿ ಸಿಎಂ ವಿಫಲವಾಗಿದ್ದು, ಕೂಡಲೇ ಬೆಳಗಾವಿಗೆ 8 ಕಚೇರಿಯನ್ನು ವರ್ಗಾಯಿಸಬೇಕು ಎಂದು ಕೋತಂಬರಿ ಆಗ್ರಹಿಸಿದರು.
ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ 371(ಜೆ) ಜಾರಿ, ಉತ್ತರ ಕರ್ನಾಟಕ ರೈತರ ಸಮಸ್ಯೆಗೆ ಸ್ಪಂದನೆ ಕುರಿತು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಹಕ್ಕೊತ್ತಾಯ ಮಾಡಲಾಗುವುದು ಎಂದು ಕೋತಂಬರಿ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮತ್ತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕೋತಂಬರಿ ಎಚ್ಚರಿಕೆ ನೀಡಿದ್ದಾರೆ.