ಎಚ್.ಡಿ.ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆದರೆ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಬಲಾತ್ಕಾರ ನಡೆಸಿದ್ದಾರೆ ಎಂದು ಅಪಹರಣದಿಂದ ರಕ್ಷಿಸಲಾಗಿರುವ ಸಂತ್ರಸ್ತೆ ಎಸ್‌ಐಟಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ದೌರ್ಜನ್ಯದ ಬಗ್ಗೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಲು ಸಂತ್ರಸ್ತೆ ಒಪ್ಪಿಕೊಂಡಿದ್ದಾರೆ.
ಬೆಂಗಳೂರು (ಮೇ.06): ಎಚ್.ಡಿ.ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆದರೆ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಬಲಾತ್ಕಾರ ನಡೆಸಿದ್ದಾರೆ ಎಂದು ಅಪಹರಣದಿಂದ ರಕ್ಷಿಸಲಾಗಿರುವ ಸಂತ್ರಸ್ತೆ ಎಸ್‌ಐಟಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ದೌರ್ಜನ್ಯದ ಬಗ್ಗೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಲು ಸಂತ್ರಸ್ತೆ ಒಪ್ಪಿಕೊಂಡಿದ್ದಾರೆ. ಆಕೆಯನ್ನು ಸೋಮವಾರ ಅಥವಾ ಮಂಗಳವಾರ ಜಡ್ಜ್ ಎದುರು ಹಾಜರುಪಡಿಸಿ ಸಿಆರ್‌ಪಿಸಿ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅಪಹರಣದಿಂದ ಶಾಕ್‌ಗೆ ಒಳಗಾಗಿದ ಸಂತ್ರಸ್ತೆಯನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ಅಧಿಕಾರಿಗಳು ಸಾಂತ್ವನ ಕೇಂದ್ರದಲ್ಲಿ ಇರಿಸಿ ಆರೈಕೆ ಮಾಡಿದ್ದಾರೆ.
ಆಪ್ತ ಸಮಾಲೋಚಕರನ್ನು ಕರೆಸಿ ಕೌನ್ಸೆಲಿಂಗ್ ಮಾಡಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಬಳಿ ಆರಂಭದಲ್ಲಿ ಕಣ್ಣೀರಿಟ್ಟ ಸಂತ್ರಸ್ತೆಯು ಬಳಿಕ ಸಾವರಿಸಿಕೊಂಡು ಪ್ರಜ್ವಲ್ ರೇವಣ್ಣ ತನ್ನ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ತನ್ನನ್ನು ಹೇಗೆ ಅಪಹರಣ ಮಾಡಿದರು, ಎಲ್ಲೆಲ್ಲಿ ಸುತ್ತಾಡಿಸಿದರು ಎಂಬುದರ ಬಗ್ಗೆಯೂ ಸಂತ್ರಸ್ತೆಮಾಹಿತಿನೀಡಿದ್ದಾರೆ.ಎಚ್.ಡಿ.ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಪ್ರಜ್ವಲ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತೆಯು ಎಸ್‌ಐಟಿ ಅಧಿಕಾರಿಗಳ ಎದುರು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣಗೆ ಮಾನಸಿಕ ರೋಗ ಇತ್ತಾ?: ಸಚಿವ ಪ್ರಿಯಾಂಕ್ ಖರ್ಗೆ
ಏನಿದು ಪ್ರಕರಣ?: ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಮೇ2ರಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಮಾಜಿ ಸಚಿವ ಎಚ್ .ಡಿ.ರೇವಣ್ಣ ಮತ್ತು ಸತೀಶ್ ಬಾಬು ಎಂಬುವವರ ವಿರುದ್ಧ ಅಪಹರಣ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ಸಂತ್ರಸ್ತೆ ಈ ಹಿಂದೆ ಎಚ್. ಚ್.ಡಿ.ರೇವಣ್ಣ ಅವರ ಹೊಳೆನರಸೀಪುರದ ಮನೆಯಲ್ಲಿ ಮನೆಗೆಲಸ ಮಾಡಿಕೊಂಡು ಇದ್ದಾಗ ಸಂಸದ ಪ್ರಜ್ವಲ್ ರೇವಣ್ಣ ಬೆದರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವೂ ಕೇಳಿ ಬಂದಿದೆ. ಈ ಬಗ್ಗೆ ಸಂತ್ರಸ್ತೆಯ ಪುತ್ರ ದೂರಿನಲ್ಲೂ ಉಲ್ಲೇಖಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ರೇವಣ್ಣನ ಆಪ್ತ ರಾಜಗೋಪಾಲ್ ಎಂಬುವವರ ತೋಟದ ಮನೆಯಲ್ಲಿ ಸಂತ್ರಸ್ತೆ ಇರುವ ಜಾಡು ಹಿಡಿದು ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ.