ವಿವಿ, ಕಾಲೇಜು ಏಕರೂಪ ಶಿಕ್ಷಣಕ್ಕೆ ತಜ್ಞರ ವಿರೋಧ

Published : May 19, 2020, 10:08 AM IST
ವಿವಿ, ಕಾಲೇಜು ಏಕರೂಪ ಶಿಕ್ಷಣಕ್ಕೆ ತಜ್ಞರ ವಿರೋಧ

ಸಾರಾಂಶ

ಬೆಂಗಳೂರು (ಮೇ. 19): ರಾಜ್ಯದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ತರುವ ಉನ್ನತ ಶಿಕ್ಷಣ ಇಲಾಖೆಯ ಚಿಂತನೆಗೆ ವಿಶ್ವವಿದ್ಯಾಲಯಗಳಿಂದ ವಿರೋಧ ವ್ಯಕ್ತವಾಗಿದೆ. ಏಕರೂಪ ಶಿಕ್ಷಣ ವ್ಯವಸ್ಥೆಯಿಂದ ವಿಶ್ವವಿದ್ಯಾಲಯಗಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಸೋಮವಾರ ‘ಕರ್ನಾಟಕದ ಉನ್ನತ ಶಿಕ್ಷಣ ಸನ್ನಿವೇಶ’ ಕುರಿತು ಕುಲಪತಿಗಳು, ಶಿಕ್ಷಣ ತಜ್ಞರೊಂದಿಗೆ ಆಯೋಜಿಸಿದ್ದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಕುಲಪತಿಗಳು ಮತ್ತು ವಿಶ್ರಾಂತ ಕುಲಪತಿಗಳು ಏಕರೂಪದ ಶಿಕ್ಷಣ ವ್ಯವಸ್ಥೆ ಅಳವಡಿಸಿಕೊಳ್ಳುವುದು ಸೂಕ್ತವಲ್ಲ ಎಂಬ ಅಭಿಪ್ರಾಯಪಟ್ಟರು.    ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ) ಈಗಾಗಲೇ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಮಾಡಿ ಪಠ್ಯಕ್ರಮ ಯಾವ ರೀತಿ ಇರಬೇಕೆಂದು ತಿಳಿಸಿದೆ. ಇದರಿಂದ ವಿವಿಗೆ ಶೇ.3ರಷ್ಟುಮಾತ್ರ ಸ್ವಾತಂತ್ರ್ಯ ಕಲ್ಪಿಸಿದ್ದು, ಇಷ್ಟರಲ್ಲಿಯೇ ಬದಲಾವಣೆ ಮಾಡಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮತ್ತೆ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವುದಾದರೆ ವಿವಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ. ವಿವಿಯಲ್ಲಿ ಉದಯಿಸುವ ಆವಿಷ್ಕಾರ ಆಲೋಚನೆಗಳಿಗೆ ತಡೆಯಾಗಲಿದೆ ಎಂದು ಕುಲಪತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂವಾದದಲ್ಲಿ ತೆಗೆದುಕೊಂಡ ನಿರ್ಣಯವನ್ನು ಉನ್ನತ ಶಿಕ್ಷಣ ಇಲಾಖೆಗೆ ಕಳುಹಿಸಲು ಎಬಿವಿಪಿ ನಿರ್ಧರಿಸಿದೆ. ಏಕರೂಪ ಶಿಕ್ಷಣ ವ್ಯವಸ್ಥೆ ರೂಪಿಸುವುದಕ್ಕಾಗಿ ಉನ್ನತ ಶಿಕ್ಷಣ ಸಮಿತಿ ರಚನೆ ಮಾಡಿದೆ. ತುಮಕೂರು ವಿವಿ, ಮೈಸೂರು ವಿವಿ, ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುÇಪತಿಗಳ ಸಮಿತಿ ರಚಿಸಿದೆ. ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಎಲ್ಲ ರೀತಿಯ ಕೋರ್ಸ್‌ಗಳ ಬಗ್ಗೆ ಅಧ್ಯಯನ ನಡೆಸಿ, ಜೂ.30ರೊಳಗೆ ಸಲ್ಲಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು (ಮೇ. 19): ರಾಜ್ಯದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ತರುವ ಉನ್ನತ ಶಿಕ್ಷಣ ಇಲಾಖೆಯ ಚಿಂತನೆಗೆ ವಿಶ್ವವಿದ್ಯಾಲಯಗಳಿಂದ ವಿರೋಧ ವ್ಯಕ್ತವಾಗಿದೆ. ಏಕರೂಪ ಶಿಕ್ಷಣ ವ್ಯವಸ್ಥೆಯಿಂದ ವಿಶ್ವವಿದ್ಯಾಲಯಗಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಸೋಮವಾರ ‘ಕರ್ನಾಟಕದ ಉನ್ನತ ಶಿಕ್ಷಣ ಸನ್ನಿವೇಶ’ ಕುರಿತು ಕುಲಪತಿಗಳು, ಶಿಕ್ಷಣ ತಜ್ಞರೊಂದಿಗೆ ಆಯೋಜಿಸಿದ್ದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಕುಲಪತಿಗಳು ಮತ್ತು ವಿಶ್ರಾಂತ ಕುಲಪತಿಗಳು ಏಕರೂಪದ ಶಿಕ್ಷಣ ವ್ಯವಸ್ಥೆ ಅಳವಡಿಸಿಕೊಳ್ಳುವುದು ಸೂಕ್ತವಲ್ಲ ಎಂಬ ಅಭಿಪ್ರಾಯಪಟ್ಟರು. 

ಲಾಕ್‌ಡೌನ್ 4.0: ತನ್ನೆಲ್ಲಾ ನೌಕರರಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ) ಈಗಾಗಲೇ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಮಾಡಿ ಪಠ್ಯಕ್ರಮ ಯಾವ ರೀತಿ ಇರಬೇಕೆಂದು ತಿಳಿಸಿದೆ. ಇದರಿಂದ ವಿವಿಗೆ ಶೇ.3ರಷ್ಟುಮಾತ್ರ ಸ್ವಾತಂತ್ರ್ಯ ಕಲ್ಪಿಸಿದ್ದು, ಇಷ್ಟರಲ್ಲಿಯೇ ಬದಲಾವಣೆ ಮಾಡಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಮತ್ತೆ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಮಾಡುವುದಾದರೆ ವಿವಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ. ವಿವಿಯಲ್ಲಿ ಉದಯಿಸುವ ಆವಿಷ್ಕಾರ ಆಲೋಚನೆಗಳಿಗೆ ತಡೆಯಾಗಲಿದೆ ಎಂದು ಕುಲಪತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂವಾದದಲ್ಲಿ ತೆಗೆದುಕೊಂಡ ನಿರ್ಣಯವನ್ನು ಉನ್ನತ ಶಿಕ್ಷಣ ಇಲಾಖೆಗೆ ಕಳುಹಿಸಲು ಎಬಿವಿಪಿ ನಿರ್ಧರಿಸಿದೆ. ಏಕರೂಪ ಶಿಕ್ಷಣ ವ್ಯವಸ್ಥೆ ರೂಪಿಸುವುದಕ್ಕಾಗಿ ಉನ್ನತ ಶಿಕ್ಷಣ ಸಮಿತಿ ರಚನೆ ಮಾಡಿದೆ. ತುಮಕೂರು ವಿವಿ, ಮೈಸೂರು ವಿವಿ, ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುÇಪತಿಗಳ ಸಮಿತಿ ರಚಿಸಿದೆ. ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಎಲ್ಲ ರೀತಿಯ ಕೋರ್ಸ್‌ಗಳ ಬಗ್ಗೆ ಅಧ್ಯಯನ ನಡೆಸಿ, ಜೂ.30ರೊಳಗೆ ಸಲ್ಲಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!