
ಬೆಂಗಳೂರು(ಜೂ.02): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಾಗೇಂದ್ರ ವಿರುದ್ಧದ ಆರೋಪದ ವಾಸ್ತವಾಂಶ ಪರಿಶೀಲನೆ: ಡಿ.ಕೆ. ಶಿವಕುಮಾರ್
ಈಗಾಗಲೇ ಎಸ್‌ಐಟಿ ತನಿಖೆ ಚುರುಕಾಗಿ ನಡೆಯುತ್ತಿದೆ. ತನಿಖೆ ಆಧರಿಸಿ ಯಾರೇ ತಪ್ಪಿತಸ್ಥರಿದ್ದರೂ ಎಲ್ಲರ ವಿರುದ್ಧವೂ ಕ್ರಮ ಜರುಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ