ಎಲ್ಲ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ. ಕೋವಿಡ್ ಪಾಸಿಟಿವ್ ರೇಟ್ ಜಾಸ್ತಿ ಇದೆ. 30 ಸಾವಿರ ವ್ಯಾಕ್ಸಿನೇಷನ್ ಲಭ್ಯವಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ: ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್
ಶಿವಮೊಗ್ಗ(ಜ.05): ಸ್ವಾಮಿ ವಿವೇಕಾನಂದ ಜಯಂತಿ ದಿನದವಾದ ಜ.12ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಕಾಂಗ್ರೆಸ್ ಸರ್ಕಾರ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ವಿವಿಧ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು.
ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಬಂಧ ಈಗಾಗಲೇ ಸಭೆ ನಡೆಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ 22 ಮೆಡಿಕಲ್ ಕಾಲೇಜು, 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೂಚನೆ ನೀಡಿದ್ದೆವೆ. ಎಲ್ಲ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ. ಕೋವಿಡ್ ಪಾಸಿಟಿವ್ ರೇಟ್ ಜಾಸ್ತಿ ಇದೆ. 30 ಸಾವಿರ ವ್ಯಾಕ್ಸಿನೇಷನ್ ಲಭ್ಯವಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ 5ನೇ ಗ್ಯಾರಂಟಿಯೇ ಪ್ರಮುಖ ಅಸ್ತ್ರ: ಸಚಿವ ಮಧು ಬಂಗಾರಪ್ಪ
ಹುಬ್ಬಳಿಯಲ್ಲಿ ಕರ ಸೇವಕನ ಬಂಧನ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಕ್ಷದವರಿಗೆ ಜನ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಕಾನೂತ್ಮಕವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಬೇಕು. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ, ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕೇವಲ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯವರು ಮಾಡಿದ ಭ್ರಷ್ಟಾಚಾರ, ದುರಾಡಳಿಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗಲಾದರೂ ಬುದ್ಧಿ ಕಲಿತುಕೊಳ್ಳಬೇಕು ಎಂದು ಕುಟುಕಿದರು.