ಇಡ್ಲಿಗೆ ಡೆಡ್ಲಿ ಪ್ಲಾಸ್ಟಿಕ್‌ ಬಳಸಿದವರಿಗೆ ನೋಟಿಸ್‌ ಜಾರಿ: ಸಚಿವ ದಿನೇಶ್ ಗುಂಡೂರಾವ್‌

Published : Mar 02, 2025, 04:51 AM ISTUpdated : Mar 02, 2025, 08:01 AM IST
ಇಡ್ಲಿಗೆ ಡೆಡ್ಲಿ ಪ್ಲಾಸ್ಟಿಕ್‌ ಬಳಸಿದವರಿಗೆ ನೋಟಿಸ್‌ ಜಾರಿ: ಸಚಿವ ದಿನೇಶ್ ಗುಂಡೂರಾವ್‌

ಸಾರಾಂಶ

ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದ್ದು, ರಾಜ್ಯದಲ್ಲಿ ಆಹಾರ ಬೇಯಿಸಲು ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. 

ಬೆಂಗಳೂರು (ಮಾ.02): ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದ್ದು, ರಾಜ್ಯದಲ್ಲಿ ಆಹಾರ ಬೇಯಿಸಲು ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. ಅಲ್ಲದೆ, ಹಸಿರು ಬಟಾಣಿಗಳಲ್ಲಿ ರಾಸಾಯನಿಕ ಬಳಕೆ ಕುರಿತು 31 ಮಾದರಿ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 26 ಅಸುರಕ್ಷಿತ ಎಂದು ದೃಢಪಟ್ಟಿದೆ ಎಂಬ ಮಾಹಿತಿಯನ್ನೂ ಅವರು ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜನವರಿ ಹಾಗೂ ಫೆಬ್ರುವರಿಯಲ್ಲಿ ಆಹಾರ ಸುರಕ್ಷತೆ ಇಲಾಖೆಯಿಂದ ನಡೆಸಿದ ವಿವಿಧ ಆಹಾರಗಳ ಪರಿಶೀಲನಾ ಅಭಿಯಾನದ ಕುರಿತು ವಿವರಣೆ ನೀಡಿದರು.

ಈ ವರ್ಷದ ಜನವರಿಯಿಂದ ವಿವಿಧ ಹೋಟೆಲ್‌, ಮಳಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳ ಬಳಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 26 ಮಾದರಿ ಅಸುರಕ್ಷಿತ ಹಾಗೂ 28 ತೀರಾ ಕಳಪೆ ಎಂಬುದು ತಿಳಿದುಬಂದಿದೆ. ಇನ್ನು ಜನವರಿಯಲ್ಲಿ 681 ರಷ್ಟು ಇಡ್ಲಿ ಮಾದರಿ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದು, ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಹಾಳೆ ಬಳಕೆ ನಿಷೇಧಿಸಿ ಆದೇಶವನ್ನೂ ಮಾಡಲಾಗುವುದು ಎಂದು ಹೇಳಿದರು.

ಹಸಿರು ಬಟಾಣಿಯಲ್ಲಿ ಹಾನಿಕಾರಕ ಬಣ್ಣ: ಇನ್ನು ಹಸಿರು ಬಟಾಣಿಗಳಲ್ಲಿ ರಾಸಾಯನಿಕ ಬಣ್ಣ ಬಳಕೆ ಕುರಿತು 31 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಈ ಪೈಕಿ 26 ಆರೋಗ್ಯಕ್ಕೆ ಸುರಕ್ಷಿತವಲ್ಲ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ವಿಶ್ಲೇಷಿಸಿ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಡ್ಲಿಯ ಡೆಡ್ಲಿ ಪ್ಲಾಸ್ಟಿಕ್‌ ಆಯ್ತು, ಈಗ ಟ್ಯಾಟೂಗೆ ನಿಷೇಧದೇಟು?: ಸಚಿವ ದಿನೇಶ್

164 ಕಳಪೆ ಔಷಧಗಳ ಪತ್ತೆ: ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಜನವರಿಯಲ್ಲಿ 1,133 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದರು. ಅವುಗಳಲ್ಲಿ 938 ಉತ್ತಮ ಗುಣಮಟ್ಟದ ಔಷಧ ಹಾಗೂ 106 ಗುಣಮಟ್ಟ ಇಲ್ಲದ ಕಳಪೆ ಔಷಧಗಳೆಂದು ನಿರ್ಧಾರವಾಗಿದೆ. ಫೆಬ್ರುವರಿ ತಿಂಗಳಲ್ಲಿ 1,841 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆಯಲಾಗಿದೆ. ಇಲ್ಲಿಯವರೆಗೆ 58 ಮಾದರಿಗಳು ಕಳಪೆ ಗುಣಮಟ್ಟದ ಔಷಧಗಳೆಂದು ನಿರ್ಧಾರವಾಗಿದ್ದು, ಪರೀಕ್ಷೆ ಮುಂದುವರೆದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌