
ಬೆಂಗಳೂರು(ಡಿ.27): ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ತಮ್ಮ ಬಳಿ ಇರುವ ಸಾಕ್ಷ್ಯ ಹಾಗೂ ಮಾಹಿತಿಗಳನ್ನು ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಐವರಿಗೆ ನೋಟಿಸ್ ಜಾರಿಗೊಳಿಸಿದೆ.
ಇವರೆಲ್ಲರಿಗೂ ಬುಧವಾರ ಖುದ್ದು ಹಾಜರಾಗಿ ಅಥವಾ ವಕೀಲರ ಮೂಲಕ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಪಿಎಸ್‌ಐ, ಎಫ್‌ಡಿಎ ಪರೀಕ್ಷೆ ನಕಲು ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮೇಲೆ ಕೋಕಾ ಜಾರಿ: ಇನ್ಮೇಲೆ ಬೇಲ್ ಸಿಗೋದೇ ಇಲ್ಲ!
ವಕೀಲರೊಬ್ಬರು ತನಿಖಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ. ಇದರಲ್ಲಿ ಕೆಲ ರಾಜಕಾರಣಿಗಳು ಪಿಎಸ್‌ಐ ನೇಮಕಾತಿ ಅವ್ಯವಹಾರ ಪ್ರಕರಣ ಸಂಬಂಧ ತಮ್ಮ ಬಳಿ ಎಲ್ಲಾ ಮಾಹಿತಿ ಇದೆ ಎಂದು ಹೇಳಿರುವ ವಿಡಿಯೊಗಳನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ. ಈ ಅಫಿಡವಿಟ್ ಆಧರಿಸಿ ತನಿಖಾ ಆಯೋಗವು ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಅವರ ಸಹೋದರ ಸತೀಶ್, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕನಕಗಿರಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಬಸವರಾಜ ದಡೇಸಗೂರು ಅವರಿಗೆ ತಮ್ಮ ಬಳಿ ಇರುವ ಸಾಕ್ಷ್ಯ ಹಾಗೂ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ