ಬೋಸರಾಜು, ಚಿಂಚನಸೂರು, ಶೆಟ್ಟರ್‌ಗೆ ಪರಿಷತ್‌ ಟಿಕೆಟ್‌ ಸಾಧ್ಯತೆ!

Published : Jun 19, 2023, 06:00 AM IST
ಬೋಸರಾಜು, ಚಿಂಚನಸೂರು, ಶೆಟ್ಟರ್‌ಗೆ ಪರಿಷತ್‌ ಟಿಕೆಟ್‌ ಸಾಧ್ಯತೆ!

ಸಾರಾಂಶ

ವಿಧಾನಪರಿಷತ್‌ನಲ್ಲಿ ಖಾಲಿಯಾಗಿರುವ ಮೂರು ಸ್ಥಾನಗಳಿಗೆ ಜೂ.30 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಎನ್‌.ಎಸ್‌. ಬೋಸರಾಜು ಹಾಗೂ ಬಾಬುರಾವ್‌ ಚಿಂಚನಸೂರು ಅವರನ್ನು ಕಣಕ್ಕಿಳಿಸುವುದು ಬಹುತೇಕ ಅಂತಿಮವಾಗಿದ್ದು, ಮತ್ತೊಂದು ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಬೆಂಗಳೂರು (ಜೂ.19) ವಿಧಾನಪರಿಷತ್‌ನಲ್ಲಿ ಖಾಲಿಯಾಗಿರುವ ಮೂರು ಸ್ಥಾನಗಳಿಗೆ ಜೂ.30 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಎನ್‌.ಎಸ್‌. ಬೋಸರಾಜು ಹಾಗೂ ಬಾಬುರಾವ್‌ ಚಿಂಚನಸೂರು ಅವರನ್ನು ಕಣಕ್ಕಿಳಿಸುವುದು ಬಹುತೇಕ ಅಂತಿಮವಾಗಿದ್ದು, ಮತ್ತೊಂದು ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಬಿಜೆಪಿಯಿಂದ ಪರಿಷತ್‌ ಸದಸ್ಯರಾಗಿದ್ದ ಲಕ್ಷ್ಮಣ ಸವದಿ, ಬಾಬುರಾವ್‌ ಚಿಂಚನಸೂರು, ಆರ್‌. ಶಂಕರ್‌ ಅವರು ವಿಧಾನಸಭೆ ಚುನಾವಣೆಗೆ ಮೊದಲು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ.

 

Raichur AIIMS: 400ನೇ ದಿನಕ್ಕೆ ಕಾಲಿಟ್ಟಏಮ್ಸ್‌ ಹೋರಾ​ಟ!

ನಾಮಪತ್ರ ಸಲ್ಲಿಕೆಗೆ ಮಂಗಳವಾರ ಅಂತಿಮ ದಿನಾಂಕವಾಗಿದ್ದು ಕಾಂಗ್ರೆಸ್‌ ಅಭ್ಯರ್ಥಿಗಳು ಸಹ ಬಹುತೇಕ ಅಂತಿಮಗೊಂಡಿದ್ದಾರೆ. ಈಗಾಗಲೇ ಸಚಿವರಾಗಿರುವ ಎನ್‌.ಎಸ್‌. ಬೋಸರಾಜು ಅವರಿಗೆ ಒಂದು ಸ್ಥಾನ ಹಾಗೂ ಬಾಬುರಾವ್‌ ಚಿಂಚನಸೂರು ಮತ್ತೊಂದು ಸ್ಥಾನ ಖಚಿತವಾಗಿದೆ.

ಮೂರನೇ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ಗೆ ಅವಕಾಶ ನೀಡಲು ತೀವ್ರ ಚರ್ಚೆ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಮೂಲಗಳ ಪ್ರಕಾರ ಶೆಟ್ಟರ್‌ ಅವರಿಗೆ ಅವಕಾಶ ನೀಡಬಹುದು ಎನ್ನಲಾಗಿದೆ.

Shakti Scheme: ಉಚಿತ ಪ್ರಯಾಣಿಸುವ ಮಹಿಳೆಯರಿಗೆ ಕಿರಿಕಿರಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ

ಬೋಸ್‌ರಾಜುಗೆ ರಾಯಚೂರು ಉಸ್ತುವಾರಿ ನೀಡುವಂತೆ ಒತ್ತಾಯ

ಮಸ್ಕಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ರಾಯಚೂರು ಜಿಲ್ಲಾ ಉಸ್ತುವಾರಿಯನ್ನು ಸಚಿವ ಎನ್‌.ಎಸ್‌. ಬೋಸರಾಜುಗೆ ನೀಡುವಂತೆ ರಾಯಚೂರು ಜಿಲ್ಲಾ ಪರಿಶಿಷ್ಟಪಂಗಡಗಳ ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಮಾರಲದಿನ್ನಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸುದ್ದಿ​ಗೋ​ಷ್ಠಿ​ಯಲ್ಲಿ ಮಾತನಾಡಿದ ಅವ​ರು, ಕಳೆದ ಹಲವು ವರ್ಷಗಳಿಂದ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದೆ ವಂಚಿತವಾಗಿತ್ತು. ಇದರಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಆದರೆ ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯವರಿಗೆ ಸಚಿವ ಸ್ಥಾನ ದೊರೆತಿರುವುದರಿಂದ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ನಿರೀಕ್ಷೆಗಳು ಹೆಚ್ಚಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಬೋಸ​ರಾ​ಜುಗೆ ರಾಯಚೂರು ಜಿಲ್ಲಾ ಉಸ್ತುವಾರಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!