ಮೀಸಲು ಅರಣ್ಯ ಪ್ರದೇಶದಲ್ಲೇ ಅಣು ವಿದ್ಯುತ್ ಸ್ಥಾವರ: ಪರಭಾರೆಗೆ ಅವಕಾಶ ಇಲ್ಲ

Published : Dec 30, 2024, 08:33 AM IST
ಮೀಸಲು ಅರಣ್ಯ ಪ್ರದೇಶದಲ್ಲೇ ಅಣು ವಿದ್ಯುತ್ ಸ್ಥಾವರ: ಪರಭಾರೆಗೆ ಅವಕಾಶ ಇಲ್ಲ

ಸಾರಾಂಶ

ಕಳೆದ ಒಂದು ವಾರದಿಂದ ತಾಲೂಕಿನ ಹಿರೇಬೆಣಕಲ್‌ನ ಸಮೀಪದ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ನಡೆಸಿದ ಪ್ರಕ್ರಿಯೆ ಈಗ ಮುಂದುವರಿದಿದೆ. 

ರಾಮಮೂರ್ತಿ ನವಲಿ

ಗಂಗಾವತಿ (ಡಿ.30): ಕಳೆದ ಒಂದು ವಾರದಿಂದ ತಾಲೂಕಿನ ಹಿರೇಬೆಣಕಲ್‌ನ ಸಮೀಪದ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ನಡೆಸಿದ ಪ್ರಕ್ರಿಯೆ ಈಗ ಮುಂದುವರಿದಿದೆ. ಈಗಾಗಲೇ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಕಂದಾಯ ಇಲಾಖೆಯವರು ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 1200 ಎಕರೆ ಭೂಮಿಯನ್ನು ಗುರುತಿಸಿದ ಬೆನ್ನಲ್ಲೇ ಪರಿಸರವಾದಿಗಳು, ಗ್ರಾಮಸ್ಥರು ಮತ್ತು ರೈತರು ಆಕ್ಷೇಪ ವ್ಯಕ್ತಪಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. 

ಆದರೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ತಾಲೂಕು ಆಡಳಿತ ಜಾಗ ಗುರುತಿಸಿದ್ದಾರೆ. ಆದರೆ ಈಗ ಅರಣ್ಯ ಇಲಾಖೆಯವರೇ ಅದನ್ನು ಅಪ್ರಸ್ತುತ ಎಂದಿದ್ದಾರೆ. ಅಖಂಡ ಗಂಗಾವತಿ ತಾಲೂಕಿನ ವ್ಯಾಪ್ತಿಯಲ್ಲಿ ಅಂದರೆ ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 15 ಸಾವಿರ ಹೆಕ್ಟೇರ್ ಪ್ರದೇಶವನ್ನು ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಮೀಸಲಿರಿಸಲಾಗಿದೆ. ಈ ಪ್ರದೇಶದಲ್ಲಿ ಒಂದು ಕಟ್ಟಡ ನಿರ್ಮಿಸಲು ಅವಕಾಶ ಇರುವುದಿಲ್ಲ ಎನ್ನುವುದು ಅರಣ್ಯ ಇಲಾಖೆ ವಾದ.

ವೈಯಕ್ತಿಕ ವಿಷಯಕ್ಕೆ ಸಚಿನ್‌ ಪಂಚಾಳ ಸತ್ತಿದ್ದಾನೆ: ಸಚಿವ ಪ್ರಿಯಾಂಕ್‌ ಖರ್ಗೆ

ಪರಭಾರೆಗೆ ಅವಕಾಶ ಇಲ್ಲ: ಕಾಯ್ದಿಟ್ಟ ಅರಣ್ಯ ಪ್ರದೇಶವು ಕೇವಲ ವನ್ಯಜೀವಿಗಳಿಗೆ ಮೀಸಲಾಗಿದೆ. ವನ್ಯಜೀವಿಗಳ ರಕ್ಷಣೆ, ಪಾಲನೆಗಾಗಿ ಇರುವ ಈ ಜಾಗವನ್ನು ಯಾವ ಇಲಾಖೆಗೂ ಪರಭಾರೆ ಮಾಡುವ ಅವಕಾಶ ಇಲ್ಲ. ಹೀಗಿರುವಾಗ ಕೋಟ್ಯಂತರ ರು. ವೆಚ್ಚದ ಸ್ಥಾವರ ನಿರ್ಮಾಣಕ್ಕೆ ಅವಕಾಶವೇ ಇಲ್ಲ ಎನ್ನುತ್ತಿದ್ದಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಅತಿ ಹೆಚ್ಚು ಪ್ರಾಣಿಗಳಿವೆ: ಹಿರೇಬೆಣಕಲ್, ಚಿಕ್ಕಬೆಣಕಲ್ ಸೇರಿದಂತೆ ಸರ್ವೇ ನಂ. 35 ಮತ್ತು 55ರಲ್ಲಿ ಅರಣ್ಯ ಪ್ರದೇಶ ಇದ್ದು, ಇಲ್ಲಿ ಅತಿ ಹೆಚ್ಚು ಪ್ರಾಣಿಗಳು ಇರುವುದನ್ನು ಅರಣ್ಯ ಇಲಾಖೆ ಸರ್ವೇ ಮಾಡಿದೆ. ಹಿರೇಬೆಣಕಲ್‌ನಿಂದ 10 ಕಿಮೀ ದೂರದಲ್ಲಿ ತೋಳಧಾಮ ಇದ್ದು, 100ಕ್ಕೂ ಹೆಚ್ಚು ಚಿರತೆಗಳು, 50 ಕರಡಿ, 25 ತೋಳ, 500ಕ್ಕೂ ಹೆಚ್ಚು ನವಿಲುಗಳು ಇರುವುದರ ಬಗ್ಗೆ ಅರಣ್ಯ ಇಲಾಖೆ ಮಾಹಿತಿ ಸಂಗ್ರಹಿಸಿದೆ.

ಸಿ.ಟಿ.ರವಿ ಪ್ರಕರಣ ಮಹಜರು ಬಸವರಾಜ ಹೊರಟ್ಟಿ ವ್ಯಾಪ್ತಿಗೆ: ಯು.ಟಿ.ಖಾದರ್‌

ಅರಣ್ಯ ಇಲಾಖೆಗೆ ಮಾಹಿತಿಯೇ ಇಲ್ಲ: ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕಂದಾಯ ಇಲಾಖೆಯವರು ಜಾಗ ಗುರುತಿಸಿರುವುದು ಅರಣ್ಯ ಇಲಾಖೆಯವರ ಗಮನಕ್ಕೆ ಇಲ್ಲವಾಗಿದೆ. ಈಗ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಅಪ್ರಸ್ತುತ ಎಂದು ಅರಣ್ಯ ಇಲಾಖೆ ಹೇಳಿದ್ದರಿಂದ ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!