'ಕೊರೋನಾ ಕೇಸ್‌ ಕಮ್ಮಿ ತೋರಿಸಲು ಟೆಸ್ಟ್‌ ಇಳಿಕೆ'

By Kannadaprabha NewsFirst Published May 15, 2021, 8:19 AM IST
Highlights
  • ಸೋಂಕು ಪ್ರಕರಣ ಕಡಿಮೆ ತೋರಿಸಲು ಪರೀಕ್ಷೆಯು ಇಳಿಕೆ
  • ರೋಗ ಲಕ್ಷಣ ಹೊಂದಿರುವ ಹಾಗೂ ಸೋಂಕಿತರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡಬೇಕು 
  • ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ಬೆಂಗಳೂರು (ಮೇ.15):  ರಾಜ್ಯ ಸರ್ಕಾರ ಕೊರೋನಾ ಸೋಂಕು ಪ್ರಕರಣ ಕಡಿಮೆ ತೋರಿಸಲು ಪರೀಕ್ಷೆ ನಡೆಸುವುದನ್ನೇ ನಿಲ್ಲಿಸುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ರೋಗ ಲಕ್ಷಣ ಹೊಂದಿರುವ ಹಾಗೂ ಸೋಂಕಿತರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಮುದಾಯ ಆಸ್ಪತ್ರೆ ಹಾಗೂ ಇತರೆ ಕಡೆ ಸರ್ಕಾರ ಪರೀಕ್ಷೆ ನಡೆಸುವುದನ್ನು ನಿಲ್ಲಿಸಿದೆ. 

ಕರ್ನಾಟಕ ಕಾಂಗ್ರೆಸ್‌ ಶಾಸಕರ 100 ಕೋಟಿ ರೂ. ನಿಧಿ ಲಸಿಕೆಗೆ! .

ರೋಗ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ ಮಾಡುತ್ತಿದೆ. ಎರಡು ವಾರದ ಹಿಂದೆ 1.8 ಲಕ್ಷದಷ್ಟಿದ್ದ ಪರೀಕ್ಷೆಯನ್ನು 1.3 ಲಕ್ಷಕ್ಕೆ ಇಳಿಕೆ ಮಾಡಿದೆ. ಪರೀಕ್ಷೆ ಹೆಚ್ಚಿಸಿದರೆ ಮಾತ್ರ ಸೋಂಕು ನಿಯಂತ್ರಿಸಲು ಸಾಧ್ಯ. ಹೀಗಾಗಿ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!