ಮುಖ್ಯಮಂತ್ರಿ ಕಚೇರಿಯಲ್ಲಿರುವ ಸಿಬ್ಬಂದಿ ಎಷ್ಟು..?

By Web DeskFirst Published Oct 16, 2018, 10:54 AM IST
Highlights

ಎಚ್.ಡಿ.ಕುಮಾರಸ್ವಾಮಿ, ಈ ಹಿಂದಿನ ಮುಖ್ಯಮಂತ್ರಿಗಳ ಕಚೇರಿಗಳ ಸಿಬ್ಬಂದಿ ಸಂಖ್ಯೆಗಿಂತ ಈಗಿನ ಸಿಬ್ಬಂದಿ ಸಂಖ್ಯೆ ಹೆಚ್ಚಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು :  ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿಕೊಂಡು ಅನಗತ್ಯವಾಗಿ ದುಂದುವೆಚ್ಚ ಮಾಡಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈ ಹಿಂದಿನ ಮುಖ್ಯಮಂತ್ರಿಗಳ ಕಚೇರಿಗಳ ಸಿಬ್ಬಂದಿ ಸಂಖ್ಯೆಗಿಂತ ಈಗಿನ ಸಿಬ್ಬಂದಿ ಸಂಖ್ಯೆ ಹೆಚ್ಚಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ತಮ್ಮ ಸಚಿವಾಲಯದಲ್ಲಿ 450 ಸಿಬ್ಬಂದಿ  ಇಲ್ಲ. 286 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದೂ  ಅವರು ತಿಳಿಸಿದ್ದಾರೆ. ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆರ್‌ಟಿಐ ಕಾರ್ಯಕರ್ತ ಬಿ.ಎಸ್. ಗೌಡ ಮೂರು ಬಾರಿ ಅರ್ಜಿ ಸಲ್ಲಿಸಿ ಪಡೆದ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದಿರುವ ಮಾಹಿತಿ ಮೇರೆಗೆ ಮಾಧ್ಯಮಗಳಲ್ಲಿ ವರದಿ ಯಾಗಿದೆ. 

ಸರ್ಕಾರಿ ಇಲಾಖೆ, ಸರ್ಕಾರದ ಅಧೀನದಲ್ಲಿ ಬರುವ ಇತರ ನಿಗಮ, ಮಂಡಳಿ ಸೇರಿದಂತೆ ಇತರೆ ಇಲಾಖೆಗಳಿಂದ ನಿಯೋಜನೆ, ಅನ್ಯಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸಂಖ್ಯೆ, ಮುಖ್ಯಮಂತ್ರಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಖ್ಯೆ ಬಿ,ಸಿ, ಮತ್ತು ಡಿ ವರ್ಗವಾರು ಮಾಹಿತಿ ಮತ್ತು ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುತ್ತಿರುವ ವಿವರಗಳನ್ನು ಕೇಳಿದ್ದರು. ಈ ಎಲ್ಲಾ ಮಾಹಿತಿ ಯನ್ನು ಒಗ್ಗೂಡಿಸಿ  450 ಎಂದು ಅರ್ಥೈ ಸಿದ್ದಾರೆ. ಆದರೆ, ವಾಸ್ತವವಾಗಿ ಒಟ್ಟು ಸಿಎಂ ಕಚೇರಿಯಲ್ಲಿ 282 ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.

click me!