30X40 ಒಳಗಿರುವ ಮನೆಗಳಿಗೆ ಓಸಿ ವಿನಾಯಿತಿ

Kannadaprabha News   | Kannada Prabha
Published : Oct 17, 2025, 05:27 AM IST
house

ಸಾರಾಂಶ

ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ

ಬೆಂಗಳೂರು : ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಇತ್ತೀಚೆಗಷ್ಟೇ ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ (ಜಿಬಿಎ) 1,200 ಚದರಡಿ ವಿಸ್ತೀರ್ಣದವರೆಗೆ ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ಸರ್ಕಾರ ಆಧಿಕೃತ ಆದೇಶ ಹೊರಡಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇತರೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಜಿಬಿಎ ಮಾದರಿಯಲ್ಲಿ ನಕ್ಷೆ ಮಂಜೂರಾತಿ ಪಡೆಯದ ಕಟ್ಟಡಗಳಿಗೂ ವಿನಾಯಿತಿ ನೀಡುವಂತೆ ಚರ್ಚಿಸಲಾಯಿತು. ಆದರೆ, ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಈ ಕುರಿತು ನಿರ್ಣಯ ಬೇಡ. ಅನುಷ್ಠಾನದ ವೇಳೆ ಅಥವಾ ಸರ್ಕಾರಿ ಆದೇಶದ ವೇಳೆ ನಕ್ಷೆ ಮಂಜೂರಾತಿ ಪಡೆಯದ ನಿರ್ದಿಷ್ಟ ಕಟ್ಟಡಗಳಿಗೂ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.

ಹೀಗಾಗಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು ಎರಡಂತಸ್ತು, ಸ್ಟಿಲ್ಟ್ ಮತ್ತು ಮೂರಂತಸ್ತಿನ ವಸತಿ ಕಟ್ಟಡಗಳಿಗೆ ಮಾತ್ರ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಲು ಸಂಪುಟ ನಿರ್ಧಾರ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?