
ಬೆಂಗಳೂರು (ಸೆ.18): ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪ ಹಿನ್ನೆಲೆ ಹಿಂದು ಮುಖಂಡ ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ದೂರುದಾರ ಸುರೇಶ್ ಬಾಬು ಮತ್ತು ಆತನ ಮಗಳ ಬಗ್ಗೆ ವಿಕ್ರಮ್ ಹೆಗಡೆ ಟಿವಿ ವಿಕ್ರಮ್ ಅಧಿಕೃತ ಪೇಜ್‌ನಲ್ಲಿ ಮಾನಹಾನಿಯಾಗುವ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರದಾರ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಉದಯನಿಧಿ ಹಿಂದೂ ಧರ್ಮವನ್ನು ವಿರೋಧಿಸುವ ತಲೆಕೆಟ್ಟ ರಾಜಕಾರಣಿ: ಸಂಸದ ರಾಘವೇಂದ್ರ
ದೂರುದಾರರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ನಾವು ಸೌಜನ್ಯಳನ್ನೇ ಬಿಟ್ಟಿಲ್ಲ.ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಲ್ಲದೇ, ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ದೂರುದಾರ ಸುರೇಶ ಬಾಬು ಎಂಬುವವರಿಂದ ದೂರು ದಾಖಲು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ